AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ಡಾಕ್ಟರ್​​: ವೈದ್ಯನಿಗೆ ಬಿತ್ತು ಸಾರ್ವಜನಿಕರಿಂದ ಧರ್ಮದೇಟು

ಫುಲ್​​ ಟೈಟ್​​ ಆಗಿ ಆಸ್ಪತ್ರೆಗೆ ಬಂದ ಡಾಕ್ಟರ್​​: ವೈದ್ಯನಿಗೆ ಬಿತ್ತು ಸಾರ್ವಜನಿಕರಿಂದ ಧರ್ಮದೇಟು

ರಾಮ್​, ಮೈಸೂರು
| Edited By: |

Updated on:Apr 29, 2026 | 12:18 PM

Share

ಮೈಸೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ವೈದ್ಯ ಡಾ. ಅನಿಲ್ ಕುಮಾರ್ ಅವರ ವಿರುದ್ಧ ಕರ್ತವ್ಯದ ಅವಧಿಯಲ್ಲಿ ಮದ್ಯ ಸೇವಿಸಿ, ಆಸ್ಪತ್ರೆ ಆವರಣದಲ್ಲೇ ಧೂಮಪಾನ ಮಾಡಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ವೈದ್ಯರ ಈ ನಡವಳಿಕೆಯಿಂದ ಸಾರ್ವಜನಿಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಮೈಸೂರು, ಏಪ್ರಿಲ್​​ 29: ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸರ್ಕಾರಿ ವೈದ್ಯ ಕೆಲಸದ ಸಮಯದಲ್ಲೇ ಮದ್ಯ ಸೇವಿಸಿ ರಂಪಾಟ ನಡೆಸಿದ್ದಾರೆ.ಕುಡಿದ ಅಮಿಲಿನಲ್ಲಿ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಅಶ್ಲೀಲ ಮೇಸೆಜ್ ಕೂಡ ಕಳುಹಿಸಿದ್ದ ಹಿನ್ನೆಲೆ ವೈದ್ಯ ಡಾ. ಅನಿಲ್ ಕುಮಾರ್​​ಗೆ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ. ಆಸ್ಪತ್ರೆ ಒಳಭಾಗದಲ್ಲೇ ಸಿಗರೇಟ್ ಸೇದುತ್ತಾ ಡಾ.ಅನಿಲ್ ಕುಮಾರ್ ಗಲಾಟೆ ಮಾಡಿದ್ದು, ಪ್ರತಿನಿತ್ಯ ವಾಟ್ಸ್ ಆ್ಯಪ್ ಗ್ರೂಪ್​​ನಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಕೆಲಸ ಮಾಡುವ ಮಹಿಳಾ ಸಿಬ್ಬಂದಿಗೆ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕುಡಿದ ಅಮಿಲಿನಲ್ಲಿ ವೈದ್ಯ ರಂಪಾಟ ಮಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್​​ನಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಮಾ.27ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸಿಬ್ಬಂದಿ ದೂರು ಕೂಡ ನೀಡಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 29, 2026 12:17 PM
Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More