AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?

ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?

ರಾಮ್​, ಮೈಸೂರು
| Edited By: |

Updated on:Nov 16, 2026 | 9:04 PM

Share

ಮೈಸೂರಿನ ಜೆಪಿ ನಗರದಲ್ಲಿ ಚೈನ್ ಸ್ನ್ಯಾಚಿಂಗ್ ಆರೋಪದ ಮೇಲೆ ಆರಂಭವಾದ ಗಲಾಟೆ ಇದೀಗ ಗುಂಪು ಘರ್ಷಣೆಗೆ ತಿರುಗಿದೆ. ಒಂದೇ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿವೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿದ್ದಾರೆ. ವಿಡಿಯೋ ನೋಡಿ.

ಮೈಸೂರು, ನವೆಂಬರ್​​ 16: ಮೈಸೂರಿನ ಜೆ.ಪಿ. ನಗರದ ಕವಿತಾ ಬೇಕರಿ ಬಳಿ ನಡೆದ ಹಿಂದೂ ಮತ್ತು ಮುಸ್ಲಿಂ ಯುವಕರ ನಡುವಿನ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಒಂದೇ ಪ್ರಕರಣದಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳು ದಾಖಲಾಗಿದ್ದು, ರಾಜಕೀಯ ತಿರುವು ಪಡೆದುಕೊಂಡಿದೆ. ಘಟನೆ ಕುರಿತು ಪುನೀತ್ ಮತ್ತು ಸಂತೋಷ್ ಎಂಬುವವರು ನೀಡಿದ ದೂರಿನ ಪ್ರಕಾರ, ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಮಹಿಳೆಯ ಸರ ಕದಿಯಲು ಯತ್ನಿಸಿದ್ದು, ಅವರನ್ನು ತಡೆಯಲು ಹೋದಾಗ 20ಕ್ಕೂ ಹೆಚ್ಚು ಜನರ ಗುಂಪು ತಮ್ಮ ಮೇಲೆ ಹಲ್ಲೆ ನಡೆಸಿದೆ ಎಂದು ಆರೋಪಿಸಿದ್ದಾರೆ. ಮತ್ತೊಂದೆಡೆ, ಸರ ಕದಿಯಲು ಯತ್ನಿಸಿದ ಆರೋಪದ ಅಪ್ರಾಪ್ತ ಬಾಲಕ, ತಾನು ಪ್ರಧಾನಮಂತ್ರಿ ಜನೌಷಧಿ ಕೇಂದ್ರದಿಂದ ಔಷಧ ತೆಗೆದುಕೊಂಡು ಹಿಂತಿರುಗುತ್ತಿದ್ದಾಗ ಪುನೀತ್ ಮತ್ತು ಸಂತೋಷ್ ತಮ್ಮ ಮೇಲೆ ಸುಳ್ಳು ಆರೋಪ ಮಾಡಿ ಚಾಕುವಿನಿಂದ ಬೆದರಿಸಿ ಹಲ್ಲೆ ನಡೆಸಿದ್ದಾರೆ ಎಂದು ಪ್ರತ್ಯಾರೋಪಿಸಿದ್ದಾನೆ. ಪೊಲೀಸರು ಎರಡೂ ಕಡೆಯ ದೂರುಗಳನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 16, 2026 09:03 PM

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More