ಮೈಸೂರಿನಲ್ಲಿ ಚೊಚ್ಚಲ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ ಮೈಸೂರಿನ ರಾಜೇಂದ್ರ ಕಲಾ ಮಂದಿರದಲ್ಲಿ ನಡೆಯುತ್ತಿದೆ. ಇದು ಕನಸಿನ ಮನೆ ಹಾಗೂ ಹೂಡಿಕೆ ಅವಕಾಶಗಳ ಕುರಿತು ಸಮಗ್ರ ಮಾಹಿತಿ ಒದಗಿಸುತ್ತಿದೆ. 25ಕ್ಕೂ ಹೆಚ್ಚು ಪ್ರತಿಷ್ಠಿತ ಡೆವಲಪರ್‌ಗಳು ಭಾಗವಹಿಸಿದ್ದು, ಇಂದು ಅಂತಿಮ ದಿನವಾಗಿದೆ. ಮೈಸೂರು ಹಾಗೂ ಸುತ್ತಮುತ್ತಲಿನ ಜನರಿಗೆ ಉತ್ತಮ ಅವಕಾಶವನ್ನು ಕಲ್ಪಿಸಲಾಗಿದ್ದು, ಎಕ್ಸ್‌ಪೋಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮೈಸೂರು, ಆಗಸ್ಟ್ 23: ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋಗೆ ಇಂದು ಅಂತಿಮ ದಿನವಾಗಿದ್ದು, ಕನಸಿನ ಮನೆಯನ್ನು ಹೊಂದಲು ಅಗತ್ಯವಿರುವ ಮಾಹಿತಿಯನ್ನು ಪಡೆಯಲು ಇದು ಸುವರ್ಣಾವಕಾಶವಾಗಿದೆ. ಮೈಸೂರಿನ ಅಗ್ರಹಾರದಲ್ಲಿರುವ ರಾಜೇಂದ್ರ ಕಲಾ ಮಂದಿರದಲ್ಲಿ ನಡೆಯುತ್ತಿರುವ ಈ ಎಕ್ಸ್‌ಪೋದಲ್ಲಿ, ಸಾವಿರಾರು ಜನರು ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ನಿನ್ನೆಯಿಂದ ಆರಂಭಗೊಂಡ ಈ ಎಕ್ಸ್‌ಪೋದಲ್ಲಿ ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ವಿವಿಧ ಭಾಗಗಳಿಂದ 25ಕ್ಕೂ ಹೆಚ್ಚು ಪ್ರತಿಷ್ಠಿತ ಡೆವಲಪರ್‌ಗಳು ಭಾಗವಹಿಸಿದ್ದಾರೆ. ಖ್ಯಾತ ಕಲಾವಿದ ಅರುಣ್ ಯೋಗಿರಾಜ್ ಮತ್ತು ಡಿಐಜಿ ಡಾಕ್ಟರ್ ಬೋರಲಿಂಗಯ್ಯ ಅವರು ಎಕ್ಸ್‌ಪೋಗೆ ಚಾಲನೆ ನೀಡಿದ್ದರು. ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಶ್ರೀವತ್ಸ, ಹರೀಶ್ ಗೌಡ ಸೇರಿದಂತೆ ಹಲವು ಗಣ್ಯರು ಎಕ್ಸ್‌ಪೋಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

