ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಸಿದ್ಧವಾದ ಅದ್ಧೂರಿ ವೇದಿಕೆ ಹೇಗಿದೆ ನೋಡಿ
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಅರಮನೆ ಶೈಲಿಯಲ್ಲೇ ಪ್ರವೇಶಿಸುವ ದ್ವಾರ ನಿರ್ಮಾಣ ಮಾಡಲಾಗಿದೆ. ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ ಖಾಕಿ ಹದ್ದಿನಕಣ್ಣಿಟ್ಟಿದೆ. ಪ್ರತಿಯೊಬ್ಬರಿಗೂ ತಪಾಸಣೆ ನಡೆಸಿ ಒಳ ಬಿಡಲಾಗುತ್ತಿದೆ.
ಮೈಸೂರು, ಆ.30: ಇಂದು ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ(Gruha Lakshmi Scheme) ಚಾಲನೆ ಹಿನ್ನೆಲೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಅರಮನೆ ಶೈಲಿಯಲ್ಲೇ ಪ್ರವೇಶಿಸುವ ದ್ವಾರ ನಿರ್ಮಾಣ ಮಾಡಲಾಗಿದೆ. ಮಹಾರಾಜ ಕಾಲೇಜು ಮೈದಾನದ ಸುತ್ತಮುತ್ತ ಖಾಕಿ ಹದ್ದಿನಕಣ್ಣಿಟ್ಟಿದೆ. ಪ್ರತಿಯೊಬ್ಬರಿಗೂ ತಪಾಸಣೆ ನಡೆಸಿ ಒಳ ಬಿಡಲಾಗುತ್ತಿದೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ವೇದಿಕೆ ಆಸನಗಳನ್ನು ಪರಿಶೀಲನೆ ನಡೆಸಿದ್ದಾರೆ.
ಮಹಾರಾಜ ಕಾಲೇಜು ಮೈದಾನದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಪ್ರತಿ ಮನೆ ಒಡತಿಯ ಖಾತೆಗೆ 2 ಸಾವಿರ ರೂ. ಜಮೆಯಾಗಲಿದೆ. ಚುನಾವಣಾ ಪೂರ್ವ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಕಾಂಗ್ರೆಸ್ ಪಕ್ಷ ಎಂದಿಗೂ ಮಹಿಳೆಯರ ಪರ ಇದೆ. ವಿಪಕ್ಷಗಳು ಇದೆಲ್ಲ ಸಾಧ್ಯವಾಗದ ಪೊಳ್ಳು ಭರವಸೆ ಎಂದು ಟೀಕಿಸಿದ್ರು. ಈಗ ನಾವು ವಿರೋಧ ಪಕ್ಷದವರಿಗೆ ತಕ್ಕ ಉತ್ತರವನ್ನು ನೀಡಿದ್ದೇವೆ. ಲೋಕಸಭಾ ಚುನಾವಣೆಗೋಸ್ಕರ ಈ ಯೋಜನೆ ಜಾರಿಗೆ ತಂದಿಲ್ಲ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ