AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು: ಯುವಕನ ಬಳಿ ‘ನನ್ನ ಕರ್ಕೊಂಡೋಗಿ ಮದುವೆಯಾಗು’ ಎನ್ನುತ್ತಿದ್ದ ಅಪ್ರಾಪ್ತೆ ನಿಗೂಢ ಸಾವು

ನಂಜನಗೂಡು: ಯುವಕನ ಬಳಿ ‘ನನ್ನ ಕರ್ಕೊಂಡೋಗಿ ಮದುವೆಯಾಗು’ ಎನ್ನುತ್ತಿದ್ದ ಅಪ್ರಾಪ್ತೆ ನಿಗೂಢ ಸಾವು

ರಾಮ್​, ಮೈಸೂರು
| Edited By: |

Updated on: Jan 10, 2026 | 9:36 AM

Share

ಮೈಸೂರಿನ ನಂಜನಗೂಡಿನಲ್ಲಿ ಅಪ್ರಾಪ್ತೆ ದಿವ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಿವ್ಯಾ ಸಾವಿನ ಸುತ್ತ ಹಲವು ಅನುಮಾನಗಳು ಮನೆ ಮಾಡಿವೆ. ಆಕೆಯ ಪ್ರಿಯಕರ ಆದಿತ್ಯನೋ ಅಥವಾ ಪೋಷಕರೋ ಸಾವಿಗೆ ಕಾರಣ ಎಂಬ ಪ್ರಶ್ನೆ ಉದ್ಭವಿಸಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದು, ಸತ್ಯಾಂಶ ಬಯಲಾಗಬೇಕಿದೆ.

ಮೈಸೂರು, ಜನವರಿ 10: ಯುವಕನೊಬ್ಬನನ್ನು ಪ್ರೀತಿಸುತ್ತಿದ್ದ ಅಪ್ರಾಪ್ತೆ ದಿವ್ಯಾ ಎಂಬಾಕೆ ನಂಜನಗೂಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದ್ದು, ಬಾಲಕಿಯ ಸಾವು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಆಕೆಯ ಸಾವಿಗೆ ಪ್ರಿಯಕರ ಆದಿತ್ಯನೋ ಅಥವಾ ಪೋಷಕರೋ ಕಾರಣ ಎಂಬ ಗೊಂದಲ ಸೃಷ್ಟಿಯಾಗಿದೆ. ದಿವ್ಯಾ, ಆದಿತ್ಯ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಇವರಿಬ್ಬರು ಚಾಮುಂಡಿಬೆಟ್ಟ ಸೇರಿದಂತೆ ಹಲವೆಡೆ ಸುತ್ತಾಡಿದ್ದು, ಅವರ ಸೆಲ್ಫಿ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ದಿವ್ಯಾ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಯುವಕನ ಕಾಟದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಒಂದು ಕಡೆ ಆರೋಪ ಕೇಳಿಬರುತ್ತಿದ್ದರೆ, ಮತ್ತೊಂದು ಕಡೆ ಆಕೆಯ ಪೋಷಕರೇ ಸಾವಿಗೆ ಕಾರಣ ಎಂಬ ಮಾತುಗಳೂ ಕೇಳಿಬರುತ್ತಿವೆ.

ದಿವ್ಯಾ ಮತ್ತು ಆದಿತ್ಯ ನಡುವಿನ ಸಂಭಾಷಣೆಯ ಆಡಿಯೋ ಕ್ಲಿಪ್‌ ಸಹ ಬಹಿರಂಗವಾಗಿದ್ದು, ಅದರಲ್ಲಿ ದಿವ್ಯಾ ತನ್ನ ಭಯವನ್ನು ವ್ಯಕ್ತಪಡಿಸಿದ್ದು, ಆದಿತ್ಯನನ್ನು ಮದುವೆಯಾಗುವಂತೆ ಕೇಳಿದ್ದಾಳೆ. ದಿವ್ಯಾ ತಂದೆ ತನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆದಿತ್ಯ ಹೇಳಿದ್ದು, ತಾನು ಯಾವುದೇ ಕಿರುಕುಳ ನೀಡಿಲ್ಲ ಎಂಬುದಕ್ಕೆ ಸಾಕ್ಷಿ ಒದಗಿಸಿದ್ದೇನೆ ಎಂದು ತಿಳಿಸಿದ್ದಾನೆ. ಪೊಲೀಸರ ತನಿಖೆಯಿಂದ ಈ ಸಾವಿನ ಅಸಲಿಯತ್ತು ಹೊರಬರಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ