AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ತವರು ಜಿಲ್ಲೆಯಲ್ಲಿ ಡಿಕೆ ಶಿವಕುಮಾರ್ ಪರ ಧ್ವನಿ: ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ

ಸಿಎಂ ತವರು ಜಿಲ್ಲೆಯಲ್ಲಿ ಡಿಕೆ ಶಿವಕುಮಾರ್ ಪರ ಧ್ವನಿ: ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ

ರಾಮ್​, ಮೈಸೂರು
| Edited By: |

Updated on:Nov 30, 2025 | 12:34 PM

Share

ಕರ್ನಾಟಕದಲ್ಲಿ ಕಾಂಗ್ರೆಸ್ ಕುರ್ಚಿ ಕದನ ತೀವ್ರಗೊಂಡಿರುವ ಬೆನ್ನಲ್ಲೇ, ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಹಜರತ್ ಸಯ್ಯದ್ ಗಮನ್ ಷಾ ಖಾದ್ರಿ ದರ್ಗಾದಲ್ಲಿ ಡಿಕೆ ಶಿವಕುಮಾರ್​ ಬೆಂಬಲಿಗರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಡಿಯೋ ನೋಡಿ.

ಮೈಸೂರು, ನವೆಂಬರ್ 30: ರಾಜ್ಯ ರಾಜಕೀಯದಲ್ಲಿ ಕುರ್ಚಿ ಕದನಕ್ಕೆ ನಿನ್ನೆ ತಾತ್ಕಾಲಿಕವಾಗಿ ತೆರೆ ಬಿದ್ದಿದೆ. ಆದರೆ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಡಿ.ಕೆ.ಶಿವಕುಮಾರ್​ ಮುಖ್ಯಮಂತ್ರಿ ಆಗಬೇಕೆಂಬ ಧ್ವನಿ ಮುಂದುವರೆದಿದೆ. ಈ ಬೆಳವಣಿಗೆಯ ಭಾಗವಾಗಿ, ಡಿ.ಕೆ.ಶಿವಕುಮಾರ್ ಪರವಾಗಿ ಮುಸ್ಲಿಮರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮೈಸೂರಿನ ಹಜರತ್ ಸಯ್ಯದ್ ಗಮನ್ ಷಾ ಖಾದ್ರಿ ದರ್ಗಾದಲ್ಲಿ ಡಿಕೆ ಶಿವಕುಮಾರ್​​ ಬೆಂಬಲಿಗರು ಒಗ್ಗೂಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. 

Published on: Nov 30, 2025 09:55 AM
Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More