ಸಿಎಂ ತವರು ಜಿಲ್ಲೆಯಲ್ಲಿ ಡಿಕೆ ಶಿವಕುಮಾರ್ ಪರ ಧ್ವನಿ: ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ
ಕರ್ನಾಟಕದಲ್ಲಿ ಕಾಂಗ್ರೆಸ್ ಕುರ್ಚಿ ಕದನ ತೀವ್ರಗೊಂಡಿರುವ ಬೆನ್ನಲ್ಲೇ, ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರಿನಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಹಜರತ್ ಸಯ್ಯದ್ ಗಮನ್ ಷಾ ಖಾದ್ರಿ ದರ್ಗಾದಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಡಿಯೋ ನೋಡಿ.
ಮೈಸೂರು, ನವೆಂಬರ್ 30: ರಾಜ್ಯ ರಾಜಕೀಯದಲ್ಲಿ ಕುರ್ಚಿ ಕದನಕ್ಕೆ ನಿನ್ನೆ ತಾತ್ಕಾಲಿಕವಾಗಿ ತೆರೆ ಬಿದ್ದಿದೆ. ಆದರೆ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಬೇಕೆಂಬ ಧ್ವನಿ ಮುಂದುವರೆದಿದೆ. ಈ ಬೆಳವಣಿಗೆಯ ಭಾಗವಾಗಿ, ಡಿ.ಕೆ.ಶಿವಕುಮಾರ್ ಪರವಾಗಿ ಮುಸ್ಲಿಮರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮೈಸೂರಿನ ಹಜರತ್ ಸಯ್ಯದ್ ಗಮನ್ ಷಾ ಖಾದ್ರಿ ದರ್ಗಾದಲ್ಲಿ ಡಿಕೆ ಶಿವಕುಮಾರ್ ಬೆಂಬಲಿಗರು ಒಗ್ಗೂಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 30, 2025 09:55 AM
