ರಾಜ್ಯದಲ್ಲಿ ಉತ್ತಮ ಮಳೆ ಬೆಳೆಗೆ ಪ್ರಾರ್ಥಿಸಿ 120 ಮಂದಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ

| Updated By: ಆಯೇಷಾ ಬಾನು

Updated on: Jul 13, 2023 | 12:43 PM

ಲೋಕ ಕಲ್ಯಾಣಕ್ಕಾಗಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ. ಕಂಸಾಳೆ ಬಾರಿಸುತ್ತಾ ಮಹದೇಶ್ವರನ ಪದ ಹಾಡುತ್ತಾ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ 120 ಮಂದಿ ಪಾದಯಾತ್ರೆಗೆ ತೆರಳುತ್ತಿದ್ದಾರೆ.

ಮೈಸೂರು: ರಾಜ್ಯದಲ್ಲಿ ಉತ್ತಮ ಮಳೆ ಬೆಳೆಗೆ ಪ್ರಾರ್ಥಿಸಿ ಲೋಕ ಕಲ್ಯಾಣಕ್ಕಾಗಿ 120 ಮಂದಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಮೈಸೂರು ತಾಲೂಕು ರಾಯನ ಹುಂಡಿ ಗ್ರಾಮದಿಂದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹದೇಶ್ವರ ಬೆಟ್ಟಕ್ಕೆ ಬರೋಬ್ಬರಿ 120 ಜನರ ತಂಡ ಕಂಸಾಳೆ ಬಾರಿಸುತ್ತಾ ಮಹದೇಶ್ವರನ ಪದ ಹಾಡುತ್ತ ಪಾದಯಾತ್ರೆಗೆ ಮುಂದಾಗಿದ್ದಾರೆ. ಹಿರಿಯರು, ಯುವಕರು ಮಕ್ಕಳು ಸೇರಿದಂತೆ ಎಲ್ಲಾ ವರ್ಗದ ಜನ ಭಾಗಿಯಾಗಿದ್ದಾರೆ. ಇವರು ಸತತ 22 ವರ್ಷದಿಂದ ಪಾದಯಾತ್ರೆ ನಡೆಸುತ್ತಿದ್ದಾರೆ. ಸದ್ಯ ನರಸೀಪುರ ಕೊಳ್ಳೇಗಾಲ ಮಾರ್ಗವಾಗಿ ಮಹದೇಶ್ವರ ಬೆಟ್ಟಕ್ಕೆ ಅಂದ್ರೆ ಸುಮಾದು 100 ಕಿಲೋ ಮೀಟರ್ ಪಾದಯಾತ್ರೆ ನಡೆಸಲಿದ್ದಾರೆ.