Mysuru News: ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯೋತ್ಸವದ ಪ್ರಯುಕ್ತ 12 ಸಾಧಕರಿಗೆ ಪ್ರಶಸ್ತಿ ಪ್ರದಾನ
ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯೋತ್ಸವ ಹಾಗು ನಾಲ್ವಡಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 12 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮೈಸೂರು: ಮೈಸೂರು ಕನ್ನಡ ವೇದಿಕೆ ಸಂಘಟನೆ ವತಿಯಿಂದ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯೋತ್ಸವ ಹಾಗು ನಾಲ್ವಡಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೈಸೂರಿನ ಕೃಷ್ಣಮೂರ್ತಿಪುರಂನ ನಮನ ಕಲಾಮಂಟಪದಲ್ಲಿ ಕಾರ್ಯಕ್ರಮ ನಡೆದಿದೆ. ಸಹಾಯಕ ಪೊಲೀಸ್ ಆಯುಕ್ತ ಗಂಗಾಧರಸ್ವಾಮಿ, ಡಾ ರೇಖಾ ಅರುಣ್, ಕನ್ನಡ ವೇದಿಕೆ ಅಧ್ಯಕ್ಷ ಎಸ್ ಬಾಲಕೃಷ್ಣ ಸೇರಿದಂತೆ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಕ ಅನಂತ ಪದ್ಮನಾಭ, ಗಾಯಕ ಆರ್ ಆನಂದ್, ಮನೋ ವಿಜ್ಞಾನಿ ಡಾ ರೇಖಾ ಮನಶಾಂತಿ ಸೇರಿದಂತೆ ವಿವಿಧ ಕ್ಷೇತ್ರಗಳ 12 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

