Mysuru: ಬೆಂಗಳೂರಲ್ಲಿ ಐವರು ಉಗ್ರರು ಸೆರೆಸಿಕ್ಕ ನಂತರ ಮೈಸೂರು ನಗರದಲ್ಲಿ ಪೊಲೀಸ್ ಕಟ್ಟೆಚ್ಚರ, ರಾತ್ರಿ ಗಸ್ತು ಹೆಚ್ಚಿಸಿದ ಆಯುಕ್ತರು

ಅರುಣ್​ ಕುಮಾರ್​ ಬೆಳ್ಳಿ

Updated on: Jul 21, 2023 | 11:10 AM

ನರಸಿಂಹರಾಜ ವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಮತ್ತು ಪ್ರಮುಖ ರಸ್ತೆಗಳಲ್ಲಿ ಗಸ್ತು ತಿರುಗುವಂತೆ ಆಯುಕ್ತರು ಸೂಚಿಸಿದ್ದಾರೆ.

ಮೈಸೂರು: ಬೆಂಗಳೂರಲ್ಲಿ ಮಂಗಳವಾರ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ದಳದ ಅಧಿಕಾರಿಗಳು (CCB Sleuths) ವಶಕ್ಕೆ ಪಡೆದ ಬಳಿಕ ರಾಜ್ಯದ ಎಲ್ಲ ಪ್ರಮುಖ ನಗರಗಳಲ್ಲಿ ಪೊಲೀಸ್ ಕಟ್ಟೆಚ್ಚರ ವಹಿಸಿದೆ. ಮೈಸೂರು ನಗರ ಪೊಲೀಸ್ ಆಯುಕ್ತ (Mysuru police commissioner) ರಮೇಶ್ ಬಾನೋಟ್ (Ramesh Bhanot) ಸಿಬ್ಬಂದಿ ಜೊತೆ ಮಾತಾಡಿ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ಜಾಗರೂಕಾರಗಿರಬೇಕೆಂದು ಸೂಚನೆ ನೀಡಿದ್ದಾರೆ. ಗುರುವಾರ ರಾತ್ರಿ ಆಯುಕ್ತರು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯೊಡನೆ ಮಾತಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಯಾವುದಾದರೂ ವ್ಯಕ್ತಿ ಅಥವಾ ಗುಂಪಿನ ನಡವಳಿಕೆ ಅನುಮಾನಾಸ್ಪದವಾಗಿ ಕಂಡರೆ ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸುವಂತೆ ಅವರು ಸೂಚಿಸಿದ್ದಾರೆ. ರಾತ್ರಿ ಕಾವಲನ್ನು ಹೆಚ್ಚಿಸುವಂತೆ ಎಲ್ಲ ಠಾಣೆಗಳ ಇನ್ಸ್ ಪೆಕ್ಟರ್ ಗಳಿಗೆ ನಿರ್ದೇಶನ ನೀಡಲಾಗಿದೆ. ನರಸಿಂಹರಾಜ ವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸುವಂತೆ ಮತ್ತು ಪ್ರಮುಖ ರಸ್ತೆಗಳಲ್ಲಿ ಗಸ್ತು ತಿರುಗುವಂತೆ ಆಯುಕ್ತರು ಸೂಚಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.