ಮೈಸೂರು: ರಾಷ್ಟ್ರಪತಿ ಸ್ವಾಗತಕ್ಕೆ ಸ್ವಚ್ಛತೆ; 50ಕ್ಕೂ ಹೆಚ್ಚು ಅಂಗಡಿಗಳು ತೆರವು, ವ್ಯಾಪಾರಿಗಳು ಆಕ್ರೋಶ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭೇಟಿಗೆ ಮುನ್ನ ಮೈಸೂರು ಮಹಾನಗರ ಪಾಲಿಕೆ 50ಕ್ಕೂ ಹೆಚ್ಚು ಫಾಸ್ಟ್‌ಫುಡ್ ಅಂಗಡಿಗಳನ್ನು ತೆರವುಗೊಳಿಸಿದೆ. ಇದರಿಂದ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದವರಿಗೆ ಇದು ದೊಡ್ಡ ಹೊಡೆತ ಎಂದು ಹೇಳಿದ್ದಾರೆ. ಪಾಲಿಕೆಯ ಕ್ರಮಕ್ಕೆ ಜನರು ಕಿಡಿಕಾರಿದ್ದಾರೆ.
ಮೈಸೂರು, ಆಗಸ್ಟ್ 31: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಮೂಲಕ ಮೈಸೂರು ಅರಮನೆಗೆ ಭೇಟಿ ನೀಡುವಂತೆ ಕೋರಿದ್ದರು. ಅವರ ಆಹ್ವಾನದ ಬೆನ್ನಲ್ಲೇ ಸೆಪ್ಟೆಂಬರ್ 1 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಆಗಮಿಸುತ್ತಿದ್ದಾರೆ. ಆ ಹಿನ್ನಲೆ ಇತ್ತ ನಗರದಲ್ಲಿ ಪಾಲಿಕೆ ಸಿಬ್ಬಂದಿ ಜೆಸಿಬಿ ಮೂಲಕ ಅಂಗಡಿಗಳನ್ನು ತೆರವುಗೊಳಿಸುತ್ತಿದ್ದಾರೆ. ಏಕಾಏಕಿ ತೆರವು ಹಿನ್ನಲೆ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 31, 2025 01:26 PM