AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀ-ವೆಡ್ಡಿಂಗ್ ಫೋಟೋಶೂಟ್ ಹುಚ್ಚಿಗೆ ಬ್ರೇಕ್ ಹಾಕೋರು ಯಾರು?: ಅಪ್ಪನ ಕಣ್ಣೆದುರಲ್ಲೇ ಹೋಯ್ತು ಮುದ್ದಿನ ಮಗಳ ಪ್ರಾಣ

ಪ್ರೀ-ವೆಡ್ಡಿಂಗ್ ಫೋಟೋಶೂಟ್ ಹುಚ್ಚಿಗೆ ಬ್ರೇಕ್ ಹಾಕೋರು ಯಾರು?: ಅಪ್ಪನ ಕಣ್ಣೆದುರಲ್ಲೇ ಹೋಯ್ತು ಮುದ್ದಿನ ಮಗಳ ಪ್ರಾಣ

ರಾಮ್​, ಮೈಸೂರು
| Edited By: |

Updated on:Nov 07, 2026 | 10:44 PM

Share

ಮೈಸೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ಸಾವನ್ನಪ್ಪಿದ್ದು, ತಂದೆ ಗಂಭೀರ ಗಾಯಗೊಂಡಿದ್ದಾರೆ. ಅಪಘಾತಕ್ಕೆ ಸಮೀಪದಲ್ಲಿ ನಡೆಯುತ್ತಿದ್ದ ಪ್ರೀ-ವೆಡ್ಡಿಂಗ್ ಫೋಟೋಶೂಟ್ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಫೋಟೋಶೂಟ್‌ಗಳು ವಾಹನ ಸವಾರರ ಗಮನವನ್ನು ಬೇರೆಡೆ ಸೆಳೆದು ಅಪಘಾತಗಳಿಗೆ ಕಾರಣವಾಗುತ್ತಿವೆ. ಇಂತಹ ಅನಿಯಂತ್ರಿತ ಫೋಟೋಶೂಟ್‌ಗಳಿಗೆ ಕಡಿವಾಣ ಹಾಕಲು ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಮೈಸೂರು, ನ.7:  ಅರಮನೆ ಸಮೀಪದ ದೊಡ್ಡ ಗಡಿಯಾರ ವೃತ್ತದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17 ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವೈಷ್ಣವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಂದೆ ವೆಂಕಟೇಶ್ ನಾಯಕ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಂದೆಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಪ್ರತ್ಯಕ್ಷದರ್ಶಿಗಳು ಮತ್ತು ಸ್ಥಳೀಯರ ಪ್ರಕಾರ, ಅಪಘಾತ ಸಂಭವಿಸಿದ ಸ್ಥಳದಲ್ಲಿ ಏಕಕಾಲದಲ್ಲಿ 10-15 ಜೋಡಿಗಳ ಪ್ರೀ-ವೆಡ್ಡಿಂಗ್ ಫೋಟೋಶೂಟ್‌ಗಳು ನಡೆಯುತ್ತಿದ್ದವು. ಇದು ವಾಹನ ಸವಾರರ, ನಿರ್ದಿಷ್ಟವಾಗಿ ಬಸ್ ಚಾಲಕನ ಗಮನವನ್ನು ಬೇರೆಡೆ ಸೆಳೆದು ಅಪಘಾತಕ್ಕೆ ಕಾರಣವಾಯಿತು ಎಂದು ಆರೋಪಿಸಲಾಗಿದೆ. ಮೈಸೂರಿನ ಪ್ರವಾಸಿ ತಾಣಗಳಲ್ಲಿ ಅಸಮರ್ಪಕವಾಗಿ ನಡೆಯುವ ಈ ರೀತಿಯ ಫೋಟೋಶೂಟ್‌ಗಳು ರಸ್ತೆ ಸುರಕ್ಷತೆಗೆ ಮಾರಕವಾಗಿದ್ದು, ಈ ಬಗ್ಗೆ ಸಾಕಷ್ಟು ದೂರುಗಳಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಅನಾಹುತಗಳು ಸಂಭವಿಸದಂತೆ ತಡೆಯಲು ಪೊಲೀಸ್ ಇಲಾಖೆ ತಕ್ಷಣ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯ ಕೇಳಿಬಂದಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 07, 2026 09:36 PM

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More