Mysuru Suttur Math: ಸುತ್ತೂರು ಗದ್ದುಗೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಭಾಗವಹಿಸಿದ್ದರು. ಈ ವೇಳೆ ಮೊದಲು ಸುತ್ತೂರು ಗದ್ದುಗೆಯ ದರ್ಶನವನ್ನು ಪಡೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆ ಸಚಿವರಾದ ಡಾ.ಪರಮೇಶ್ವರ್, ಜಾರ್ಜ್, ಕೆ.ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಭಾಗಿ ಆಗಿದ್ದರು.
ಮೈಸೂರು, ಫೆಬ್ರವರಿ 7: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ದೆಹಲಿಗೆ ಹೋಗಿದ್ದ ಸಿಎಂ ಸಿದ್ದರಾಮಯ್ಯ ಅಲ್ಲಿಂದ ನೇರವಾಗಿ ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು (Suttur Math) ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದರು. ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮೊದಲಿಗೆ ಸುತ್ತೂರು ಗದ್ದುಗೆಯ ದರ್ಶನ ಪಡೆದುಕೊಂಡಿದ್ದಾರೆ. ಬಳಿಕ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಚಿವರಾದ ಡಾ.ಪರಮೇಶ್ವರ್, ವೆಂಕಟೇಶ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos