Mysuru Suttur Math: ಸುತ್ತೂರು ಗದ್ದುಗೆಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

Edited By:

Updated on: Feb 07, 2024 | 10:57 PM

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಭಾಗವಹಿಸಿದ್ದರು. ಈ ವೇಳೆ ಮೊದಲು ಸುತ್ತೂರು ಗದ್ದುಗೆಯ ದರ್ಶನವನ್ನು ಪಡೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಜೊತೆ ಸಚಿವರಾದ ಡಾ.ಪರಮೇಶ್ವರ್, ಜಾರ್ಜ್, ಕೆ.ವೆಂಕಟೇಶ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಭಾಗಿ ಆಗಿದ್ದರು.

ಮೈಸೂರು, ಫೆಬ್ರವರಿ 7: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ದೆಹಲಿಗೆ ಹೋಗಿದ್ದ ಸಿಎಂ ಸಿದ್ದರಾಮಯ್ಯ ಅಲ್ಲಿಂದ ನೇರವಾಗಿ ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು (Suttur Math) ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದರು. ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್​ನಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮೊದಲಿಗೆ ಸುತ್ತೂರು ಗದ್ದುಗೆಯ ದರ್ಶನ ಪಡೆದುಕೊಂಡಿದ್ದಾರೆ. ಬಳಿಕ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಚಿವರಾದ ಡಾ.ಪರಮೇಶ್ವರ್, ವೆಂಕಟೇಶ್​, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More