ಮೈಸೂರು: ಮಹಾಬಲೇಶ್ವರ ದೇವಸ್ಥಾನದ ಹುಂಡಿ ಹಣ, ಬೆಳ್ಳಿ ವಿಗ್ರಹಗಳು, ಕಂಚಿನ ಆಭರಣ ದೋಚಿದ ಕಳ್ಳರು

Edited By:

Updated on: Jan 15, 2026 | 11:53 AM

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ತೊರವಳ್ಳಿ ಗ್ರಾಮದ ಮಹಾಬಲೇಶ್ವರ ದೇವಸ್ಥಾನದಲ್ಲಿ ಜ.14ರ ರಾತ್ರಿ ಕಳ್ಳತನ ನಡೆದಿದೆ. ಹುಂಡಿ ಹಣ, ಬೆಳ್ಳಿ ವಿಗ್ರಹಗಳು ಮತ್ತು ಕಂಚಿನ ಆಭರಣಗಳನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ಸರಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದು ಜಿಲ್ಲೆಯ ಸುರಕ್ಷತಾ ಸವಾಲನ್ನು ಎತ್ತಿ ತೋರಿಸುತ್ತದೆ.

ಮೈಸೂರು, ಜ.15: ಜಿಲ್ಲೆಯಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ. ಇದೀಗ ನಿನ್ನೆ (ಜ.14) ರಾತ್ರಿ ಮಹಾಬಲೇಶ್ವರ ದೇವಸ್ಥಾನದಲ್ಲಿ ಕಳ್ಳತನ ಆಗಿದೆ. ಸರಗೂರು ತಾಲೂಕಿನ ತೊರವಳ್ಳಿ ಗ್ರಾಮದಲ್ಲಿರುವ ಈ ದೇವಾಲಯದಲ್ಲಿದ್ದ ಹುಂಡಿ ಹಣ, ಬೆಳ್ಳಿ ವಿಗ್ರಹಗಳು, ಕಂಚಿನ ಆಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ಬೆಳಗ್ಗೆ ಪೂಜೆ ಮಾಡಲು ದೇವಸ್ಥಾನಕ್ಕೆ ಬಂದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಇತ್ತೀಚಿಗೆ ಮೈಸೂರು ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗಿದೆ. ಕಳ್ಳರು, ದರೋಡೆಕೋರರ ಕಾಟಕ್ಕೆ ಮೈಸೂರಿನ ಜನ ಬೆಚ್ಚಿ ಬಿದ್ದಿದ್ದರೆ. ಇದೀಗ ಈ ಪ್ರಕಣಕ್ಕೆ ಸಂಬಂಧಿಸಿದಂತೆ ಸರಗೂರು ಪೊಲೀಸ್ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

Published on: Jan 15, 2026 11:50 AM