ಮೈಸೂರಿನಲ್ಲಿ ಮೂವರ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೈಸೂರಿನ ಟಿ. ನರಸೀಪುರದಲ್ಲಿ ಉಲ್ಲಾಸ್‌ಗೌಡನ ಕಿರುಕುಳಕ್ಕೆ ದಂಪತಿ ಹಾಗೂ ಪುತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಉಲ್ಲಾಸ್‌ಗೌಡನೇ ಸಾವಿಗೆ ಕಾರಣವೆಂದು ಉಲ್ಲೇಖಿಸಲಾಗಿದೆ. ಶಾಸಕ ಪುಟ್ಟರಂಗಶೆಟ್ಟಿ ಅವರು ಆರೋಪಿಗೆ ಕಠಿಣ ಶಿಕ್ಷೆ, ಕುಟುಂಬಕ್ಕೆ ಪರಿಹಾರ ಹಾಗೂ ಜಮೀನು ಹಸ್ತಾಂತರಕ್ಕೆ ಒತ್ತಾಯಿಸಿದ್ದಾರೆ. ಕಾನೂನು ಮೂಲಕ ನ್ಯಾಯ ಒದಗಿಸಲು ಬದ್ಧ ಎಂದು ತಿಳಿಸಿದ್ದಾರೆ.
ಮೈಸೂರು, ಜೂ.23: ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಉಲ್ಲಾಸ್‌ಗೌಡ ಎಂಬಾತನ ಕಿರುಕುಳದಿಂದಾಗಿ ಶಿವಣ್ಣ, ನಾಗರತ್ನ ಹಾಗೂ ಅವರ ಮಗಳು ರಕ್ಷಿತಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆ ನಿಶ್ಚಿತವಾಗಿದ್ದ ರಕ್ಷಿತಾಳಿಗೆ ಉಲ್ಲಾಸ್‌ಗೌಡ ಫೋಟೋಗಳನ್ನು ಕಳುಹಿಸಿ ಬೆದರಿಕೆ ಹಾಕಿದ್ದ. ಈ ಕುರಿತು ಡೆತ್ ನೋಟ್‌ನಲ್ಲಿ ಉಲ್ಲಾಸ್‌ಗೌಡನೇ ತಮ್ಮ ಸಾವಿಗೆ ಕಾರಣ ಎಂದು ಕುಟುಂಬ ಸ್ಪಷ್ಟವಾಗಿ ಉಲ್ಲೇಖಿಸಿದೆ. ಈ ಪ್ರಕರಣದ ಬಗ್ಗೆ ಮಾತನಾಡಿರುವ ಶಾಸಕ ಪುಟ್ಟರಂಗಶೆಟ್ಟಿ ಅವರು, ಮೃತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಬದ್ಧ ಎಂದು ಹೇಳಿದ್ದಾರೆ. ಆರೋಪಿ ಉಲ್ಲಾಸ್‌ಗೌಡನಿಗೆ ಕಠಿಣ ಶಿಕ್ಷೆ, ಅಗತ್ಯವಿದ್ದರೆ ಮರಣದಂಡನೆ ವಿಧಿಸಬೇಕು ಎಂದು ಮೃತರ ಸಂಬಂಧಿಕರು ಆಗ್ರಹಿಸಿದ್ದಾರೆ. ಅಲ್ಲದೆ, ಕುಟುಂಬದವರು ನಿರ್ಮಿಸಿದ್ದ ಮನೆಯ ಜಮೀನನ್ನು ಉಳಿದಿರುವ ಕುಟುಂಬ ಸದಸ್ಯರಿಗೆ ಹಸ್ತಾಂತರಿಸುವಂತೆ ಮತ್ತು ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆಯೂ ಶಾಸಕರ ಮೂಲಕ ಬೇಡಿಕೆ ಇಟ್ಟಿದ್ದಾರೆ. ಸಿದ್ದರಾಮಯ್ಯ ಅವರ ಕ್ಷೇತ್ರವಾದ ವರುಣಾದಲ್ಲಿ ಈ ಘಟನೆ ನಡೆದಿದ್ದು, ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕರು ಭರವಸೆ ನೀಡಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
