ಮೈಸೂರು: ಮೂಟೆಗಟ್ಟಲೆ ಕಲ್ಲುಗಳನ್ನು ತಂದಿಟ್ಟು ಕಲ್ಲುತೂರಾಟ ನಡೆಸಲಾಯ್ತೇ? ಹಲವು ಅನುಮಾನ ಸೃಷ್ಟಿ
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣ ಇದೀಗ ಹಲವು ಅನುಮಾನಕ್ಕೆ ಕಾರಣವಾಗಿದೆ. ಮೂಟೆಗಟ್ಟಲೆ ಕಲ್ಲುಗಳನ್ನು ಸಂಗ್ರಹಿಸಿ ತಂದಿಟ್ಟು, ಏಕಾಏಕಿ ಕಲ್ಲು ತೂರಾಟ ನಡೆಸಲಾಗಿದೆಯೇ ಎಂಬ ಅನುಮಾನ ಈಗ ಸೃಷ್ಟಿಯಾಗಿದೆ. ಇದಕ್ಕೆ ಕಾರಣಗಳು ಇವೆ. ಸದ್ಯ, ಪೊಲೀಸರು ಪೌರಕಾರ್ಮಿಕರ ಜೊತೆ ಸೇರಿ ಕಲ್ಲು ಸಂಗ್ರಹಿಸುತ್ತಿರುವ ವಿಡಿಯೋ ಇಲ್ಲಿದೆ.
ಮೈಸೂರು, ಫೆಬ್ರವರಿ 11: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ದಾಂಧಲೆ ನಡೆದಿದ್ದು, ಇದೀಗ ಸಹಜ ಸ್ಥಿತಿಗೆ ಮರಳುತ್ತಿದೆ. ಎಸಿಪಿ ಗಜೇಂದ್ರ ಪ್ರಸಾದ್ ಘಟನಾ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಸದ್ಯ ಠಾಣೆ ಮುಂಭಾಗ ಬಿದ್ದಿರುವ ಕಲ್ಲುಗಳನ್ನು ಪೌರಕಾರ್ಮಿಕರ ನೆರವಿನಿಂದ ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಸೋಮವಾರ ರಾತ್ರಿ ಠಾಣೆ ಮುಂಭಾಗ ಜಮಾಯಿಸಿದ್ದ ಸಾವಿರಾರು ಯುವಕರು ಕಲ್ಲು ತೂರಾಟ ನಡೆಸಿದ್ದರು.
ಸದ್ಯ ಕಲ್ಲುತೂರಾಟ ಮಾಡಿದವರ ಪತ್ತೆಗೆ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ. ಸಿಸಿ ಕ್ಯಾಮರಾಗಳ ದೃಶ್ಯಾವಳಿಗಳನ್ನು ವಶಕ್ಕೆ ಪಡೆದ ಪೊಲೀಸರು ಯುವಕರ ಗುರುತು ಪತ್ತೆ ಮಾಡುತ್ತಿದ್ದಾರೆ.
ಇದನ್ನೂ ಓದಿ: ಮೈಸೂರಿನಲ್ಲಿ ಕಿಡಿ ಹೊತ್ತಿಸಿದ ಸಾಮಾಜಿಕ ಮಾಧ್ಯಮ ಪೋಸ್ಟ್: ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ, ಅಶ್ರುವಾಯು ಪ್ರಯೋಗ
ಕಲ್ಲು ತೂರಾಟದ ವಿಡಿಯೋ ನೋಡಲು ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ

VIDEO: ಆಂಬ್ಯುಲೆನ್ಸ್ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
