ನಾಗಮಂಗಲ ಕೋಮುಗಲಭೆ ಕೇಸ್: ಬೆಂಕಿ ಬಿದ್ದಿದ್ದ ಬೈಕ್ ಶೋರೂಂಗೆ ಕುಮಾರಸ್ವಾಮಿ ಭೇಟಿ
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಕೋಮುಗಲಭೆ ನಡೆದ ಸ್ಥಳಕ್ಕೆ ಇಂದು (ಸೆ.13) ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ (Nagamangala Communal Riots) ನಡೆದಿತ್ತು. ಕೋಮುಗಲಭೆ ನಡೆದ ಸ್ಥಳಕ್ಕೆ ಇಂದು (ಸೆ.13) ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಅವರು ಭೇಟಿ ನೀಡಿದ್ದಾರೆ. ಬೆಂಕಿ ಬಿದ್ದಿದ್ದ ಬೈಕ್ ಶೋರೂಂ, ಅಂಗಡಿಗಳಿಗೆ ಹೆಚ್ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಂತೆ ಬೀದಿಯಲ್ಲಿರುವ ಸಾಧನ ಟೆಕ್ಸ್ಟೈಲ್ ಅಂಗಡಿಗೂ ಹೆಚ್ಡಿ ಕುಮಾರಸ್ವಾಮಿ ಭೇಟಿ ನೀಡಿದರು. ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜೆಡಿಎಸ್ ಮಾಜಿ ಶಾಸಕ ಸುರೇಶ್ಗೌಡ ಸಾಥ್ ನೀಡಿದರು. ಘಟನೆ ಬಗ್ಗೆ ಅಧಿಕಾರಿಗಳು ಮತ್ತು ಅಂಗಡಿ ಮಾಲೀಕರಿಂದ ಮಾಹಿತಿ ಪಡೆದರು.
ಇದನ್ನೂ ನೋಡಿ: ನಾಗಮಂಗಲ ಕೋಮುಗಲಭೆ ಕೇಸ್: ಹೆಚ್ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರು
ಬಿಗ್ಬಾಸ್ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
