ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಜೈಲಿನಿಂದ ಬಿಡುಗಡೆ

ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಜೈಲಿನಿಂದ ಬಿಡುಗಡೆ

ಪ್ರಶಾಂತ್​ ಬಿ.
| Updated By: ಆಯೇಷಾ ಬಾನು

Updated on: Oct 01, 2024 | 8:15 AM

ಕಳೆದ ಸೆಪ್ಟೆಂಬರ್ 11ರಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಆದ ಕೋಮುಗಲಭೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ 55 ಆರೋಪಿಗಳನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ನ್ಯಾಯಾಂಗ ಬಂಧನದಲ್ಲಿದ್ದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ ಸಮುದಾಯದ 37 ಆರೋಪಿಗಳನ್ನು ಬಿಡುಗಡೆ ಮಾಡಲಾಗಿದೆ.

ಮಂಡ್ಯ, ಅ.01: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ 55 ಆರೋಪಿಗಳು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಮಂಡ್ಯ 1ನೇ ಜಿಲ್ಲಾ & ಸೆಷನ್ಸ್​ ಕೋರ್ಟ್​ನಿಂದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದ್ದು ಸದ್ಯ ಜೈಲಿನಿಂದ ಆಚೆ ಬಂದಿದ್ದಾರೆ. ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕೋಮುಗಲಭೆ ಆರಂಭಗೊಂಡು ಜಿಲ್ಲೆಯ ನಾಗಮಂಗಲ ಹೊತ್ತಿ ಉರಿದಿತ್ತು. ಕಿಡಿಗೇಡಿಗಳು ಕಂಡಕಂಡಲ್ಲಿ ಅಂಗಡಿ ಮುಂಗಟ್ಟುಗಳಿಗೆ ಬೆಂಕಿ ಹಚ್ಚಿದ್ದರು. ಇಡೀ ಪ್ರಕರಣದ ಕೇಂದ್ರಬಿಂದು ಬದ್ರಿಕೊಪ್ಪಲು ಗ್ರಾಮ ಅಕ್ಷರಸಹಃ ಸ್ಮಶಾನ ಮೌನವಾಗಿತ್ತು. ಬಂಧನ ಭೀತಿಯಲ್ಲಿ ಹಲವು ಯುವಕರು ಗ್ರಾಮವನ್ನ ತೊರೆದಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ