AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು

‘ಅಮೆರಿಕಾ ಅಮೆರಿಕಾ’ ಸೀಕ್ವೆಲ್​ನಲ್ಲಿ ಮನೋಮೂರ್ತಿ ಸಂಯೋಜನೆಯಲ್ಲಿ ಐದು ಹಾಡು

ರಾಜೇಶ್ ದುಗ್ಗುಮನೆ
|

Updated on: Aug 04, 2026 | 12:27 PM

Share

‘ಅಮೆರಿಕಾ ಅಮೆರಿಕಾ’ ಸಿನಿಮಾ ಹಾಡು ಸೂಪರ್ ಹಿಟ್ ಆಗಿತ್ತು. ಈ ಹಾಡುಗಳು ಗಮನ ಸೆಳೆದಿದ್ದವು. ಈಗ ‘ಅಮೆರಿಕಾ ಅಮೆರಿಕಾ’ ಸೀಕ್ವೆಲ್ ಸಿದ್ಧವಾಗುತ್ತಿದೆ. ಈ ಚಿತ್ರದ ಹಾಡುಗಳು ಕೂಡ ಗಮನ ಸೆಳೆಯಲು ರೆಡಿ ಆಗಿವೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಸಿಕ್ಕಿದೆ. ನಾಗತಿಹಳ್ಳಿ ಚಂದ್ರಶೇಖರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ.

ಕನ್ನಡ ಚಿತ್ರರಂಗದ ಅದ್ಭುತ ಮೆಲೋಡಿ ಕಾಂಬಿನೇಷನ್ ಎಂದೇ ಪ್ರಸಿದ್ಧವಾಗಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹಾಗೂ ಸಂಗೀತ ನಿರ್ದೇಶಕ ಮನೋ ಮೂರ್ತಿ ಮತ್ತೆ ಕೈಜೋಡಿಸಿದ್ದಾರೆ. ಈ ಹಿಂದೆ ‘ಅಮೆರಿಕಾ ಅಮೆರಿಕಾ’, ‘ನನ್ನ ಪ್ರೀತಿಯ ಹುಡುಗಿ’, ‘ಅಮೃತಧಾರೆ’ ಹಾಗೂ ‘ಮಾತಾಡ್ ಮಾತಾಡ್ ಮಲ್ಲಿಗೆ’ಯಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ಮಿಂಚಿದ್ದ ಈ ಜೋಡಿ, ಇದೀಗ ‘ಅಮೆರಿಕಾ ಅಮೆರಿಕಾ 2’ ಚಿತ್ರದ ಮೂಲಕ ಮತ್ತೆ ಒಂದಾಗಿದೆ.

ವಿಶೇಷವೆಂದರೆ, ಫ್ರೆಂಡ್‌ಶಿಪ್ ಡೇ ಶುಭ ಸಂದರ್ಭದಲ್ಲೇ ಇಬ್ಬರೂ ಮುಖಾಮುಖಿಯಾಗಿ ಈ ಹೊಸ ಸಿನಿಮಾ ಹಾಗೂ ಅದರ ಸಂಗೀತದ ಕುರಿತು ಕುತೂಹಲಕಾರಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ನಾಗತಿಹಳ್ಳಿ ಚಂದ್ರಶೇಖರ್ ಅವರು ಈ ಸಿನಿಮಾಗಾಗಿ ಐದು ಅದ್ಭುತ ಹಾಡುಗಳನ್ನು ರಚಿಸಿದ್ದು, ಅದಕ್ಕೆ ಮನೋ ಮೂರ್ತಿ ಅವರು ಈ ಬಾರಿಯೂ ಮಂತ್ರಮುಗ್ಧಗೊಳಿಸುವ ಸ್ವರ ಸಂಯೋಜನೆ ಮಾಡಿದ್ದಾರೆ.

ಈ ಐದೂ ಹಾಡುಗಳ ಆಡಿಯೋ ಹಕ್ಕುಗಳನ್ನು ‘ಮನೋ ಮೂರ್ತಿ ಮ್ಯೂಸಿಕಲ್’ ಆಡಿಯೋ ಲೇಬಲ್ ಹೆಮ್ಮೆಯಿಂದ ಪಡೆದುಕೊಂಡಿದೆ. ಗೆಳೆತನದ ಜೊತೆಗೆ ವ್ಯವಹಾರವೂ ಚೆನ್ನಾಗಿರಲಿ ಎಂಬ ಉದ್ದೇಶದಿಂದ ಸ್ವತಃ ಮನೋ ಮೂರ್ತಿ ಅವರ ಸಂಸ್ಥೆಯ ಮೂಲಕವೇ ಈ ಹಾಡುಗಳನ್ನು ಮಾರುಕಟ್ಟೆಗೆ ತರಲು ನಿರ್ಧರಿಸಲಾಗಿದೆ. ಶೀಘ್ರದಲ್ಲೇ ಈ ಚಿತ್ರದ ಎಲ್ಲಾ ಹಾಡುಗಳು ರಿಲೀಸ್ ಆಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More