AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಸಿನಿಮಾಗಳ ಉಳಿವಿಗಾಗಿ ಪ್ರೇಕ್ಷಕರಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ಮನವಿ

ಕನ್ನಡ ಸಿನಿಮಾಗಳ ಉಳಿವಿಗಾಗಿ ಪ್ರೇಕ್ಷಕರಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ಮನವಿ

ಮದನ್​ ಕುಮಾರ್​
|

Updated on: Sep 24, 2026 | 5:54 PM

Share

ಇತ್ತೀಚೆಗೆ ಬಿಡುಗಡೆ ಆದ ‘ಅಮೆರಿಕ ಅಮೆರಿಕ 2’ ಸಿನಿಮಾಗೆ ಪ್ರೇಕ್ಷಕರ ಬೆಂಬಲ ಬೇಕಿದೆ ಎಂದು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದ್ದಾರೆ. ಅವರು ಹಂಚಿಕೊಂಡ ವಿಡಿಯೋ ಇಲ್ಲಿದೆ. ‘ಪರಭಾಷಾ ಸಿನಿಮಾಗಳ ದಾಳಿ ಪ್ರಾರಂಭ ಆಗಿದೆ. ಹಾಗಾಗಿ ನಮಗೆ ಚಿತ್ರಮಂದಿರಗಳ, ಪರದೆಗಳ ಕೊರತೆ ಉಂಟಾಗಿದೆ’ ಎಂದು ಅವರು ಹೇಳಿದ್ದಾರೆ.

ಇತ್ತೀಚೆಗೆ ಬಿಡುಗಡೆ ಆದ ‘ಅಮೆರಿಕ ಅಮೆರಿಕ 2’ ಸಿನಿಮಾಗೆ ಪ್ರೇಕ್ಷಕರ ಬೆಂಬಲ ಬೇಕಿದೆ ಎಂದು ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದ್ದಾರೆ. ಅವರು ಹಂಚಿಕೊಂಡ ವಿಡಿಯೋ ಇಲ್ಲಿದೆ. ‘ಪರಭಾಷಾ ಸಿನಿಮಾಗಳ ದಾಳಿ ಪ್ರಾರಂಭ ಆಗಿದೆ. ಹಾಗಾಗಿ ನಮಗೆ ಚಿತ್ರಮಂದಿರಗಳ, ಪರದೆಗಳ ಕೊರತೆ ಉಂಟಾಗಿದೆ. ನಮ್ಮ ಮನೆ ಹತ್ತಿರದ ಮಾಲ್​ನಲ್ಲಿ ಸಿನಿಮಾ ಇಲ್ಲ ಸರ್ ಅಂತ ಕೆಲವರು ಫೋನ್ ಮಾಡಿ ಹೇಳುತ್ತಿದ್ದಾರೆ. ನಿಮ್ಮ ಅಸಹಾಯಕತೆ ಅರ್ಥ ಆಗುತ್ತದೆ. ನೀವು ಕುಟುಂಬದ ಸದಸ್ಯರ ಜೊತೆ ಚಿತ್ರಮಂದಿರಕ್ಕೆ ಹೋಗುತ್ತೀರಿ. ಹಾಗಾಗಿ ದೂರದ ಮಾಲ್​ಗಳಿಗೆ ಹೋಗುವುದು ಕಷ್ಟ. ಪರಭಾಷೆಯ ದಾಳಿ, ಪ್ರವಾಹದಲ್ಲಿ ಕನ್ನಡ ಸಿನಿಮಾಗಳನ್ನು ಕಾಪಾಡಿಕೊಳ್ಳುವುದು ನಮಗೆ ಈಗ ಇರುವ ದೊಡ್ಡ ಸವಾಲು. ಒಳ್ಳೆಯ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವುದು ನಿಮ್ಮ ಸ್ವಾತಂತ್ರ್ಯ. ಅದರ ಬಗ್ಗೆ ಆಕ್ಷೇಪ ಮಾಡುವ ಹಕ್ಕು ನಮ್ಮದಲ್ಲ. ಆದರೆ ನಮ್ಮ ಪ್ರಾರ್ಥನೆ ಏನೆಂದರೆ, ಕನ್ನಡ ಚಿತ್ರಗಳು ಉಳಿಯಲು ಅವಕಾಶ ಕೊಡಿ’ ಎಂದು ನಾಗತಿಹಳ್ಳಿ ಚಂದ್ರಶೇಖರ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More