Video: ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರದಲ್ಲಿ ಮಾರ್ಚ್ 17ರಂದು ನಡೆದ ಕೋಮು ಹಿಂಸಾಚಾರದ ಪುಮುಖ ಆರೋಪಿ ಫಾಹಿಂ ಖಾನ್ ಮನೆಯನ್ನು ನೆಲಸಮ ಮಾಡಲಾಗಿದೆ. ಔರಂಗಜೇಬನ ಸಮಾಧಿ ತೆರವಿಗೆ ಸಂಬಂಧಿಸಿದಂತೆ ಹಿಂಸಾಚಾರ ನಡೆದಿತ್ತು. ದೇಶದ್ರೋಹದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನಾಗ್ಪುರದ ಯಶೋಧರ ನಗರ ಪ್ರದೇಶದ ಸಂಜಯ್ ಬಾಗ್ ಕಾಲೋನಿಯಲ್ಲಿರುವ ಈ ಆಸ್ತಿಯನ್ನು ಖಾನ್ ಅವರ ಪತ್ನಿಯ ಹೆಸರಿನಲ್ಲಿ ನೋಂದಾಯಿಸಲಾಗಿದೆ .
ನಾಗ್ಪುರ, ಮಾರ್ಚ್ 24: ನಾಗ್ಪುರದಲ್ಲಿ ಮಾರ್ಚ್ 17ರಂದು ನಡೆದ ಕೋಮು ಹಿಂಸಾಚಾರದ ಪುಮುಖ ಆರೋಪಿ ಫಾಹಿಂ ಖಾನ್ ಮನೆಯನ್ನು ನೆಲಸಮ ಮಾಡಲಾಗಿದೆ. ಔರಂಗಜೇಬನ ಸಮಾಧಿ ತೆರವಿಗೆ ಸಂಬಂಧಿಸಿದಂತೆ ಹಿಂಸಾಚಾರ ನಡೆದಿತ್ತು. ದೇಶದ್ರೋಹದ ಆರೋಪದಡಿಯಲ್ಲಿ ಪ್ರಕರಣ ದಾಖಲಾಗಿದ್ದು, ನಾಗ್ಪುರದ ಯಶೋಧರ ನಗರ ಪ್ರದೇಶದ ಸಂಜಯ್ ಬಾಗ್ ಕಾಲೋನಿಯಲ್ಲಿರುವ ಈ ಆಸ್ತಿಯನ್ನು ಖಾನ್ ಅವರ ಪತ್ನಿಯ ಹೆಸರಿನಲ್ಲಿ ನೋಂದಾಯಿಸಲಾಗಿದೆ .
ಮಾರ್ಚ್ 17 ರಂದು ಛತ್ರಪತಿ ಸಂಭಾಜಿನಗರದಲ್ಲಿ ಔರಂಗಜೇಬನ ಸಮಾಧಿಯನ್ನು ತೆಗೆದುಹಾಕುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಧಾರ್ಮಿಕ ಶಾಸನಗಳನ್ನು ಹೊಂದಿರುವ ‘ಚಾದರ್’ ಅನ್ನು ಸುಟ್ಟುಹಾಕಲಾಗಿದೆ ಎಂಬ ವದಂತಿಗಳು ಹರಡಿದ ನಂತರ ಹಿಂಸಾಚಾರ ಭುಗಿಲೆದ್ದಿತು. ಈ ಘರ್ಷಣೆಯ ಪರಿಣಾಮವಾಗಿ ನಗರದ ಹಲವಾರು ಭಾಗಗಳಲ್ಲಿ ವ್ಯಾಪಕ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಲಾಯಿತು, ಮೂವರು ಉಪ ಪೊಲೀಸ್ ಆಯುಕ್ತರ ಶ್ರೇಣಿಯ ಅಧಿಕಾರಿಗಳು ಸೇರಿದಂತೆ 33 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ