ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ನೈನಾರ್ ನಾಗೇಂದ್ರನ್ಗೆ ಸಿಹಿ ತಿನ್ನಿಸಿ ಶುಭಾಶಯ ಕೋರಿದ ಅಣ್ಣಾಮಲೈ
ತಮಿಳುನಾಡಿನ ಬಿಜೆಪಿ ಶಾಸಕ ನೈನಾರ್ ನಾಗೇಂದ್ರನ್ ಈ ಹಿಂದೆ ಎಐಎಡಿಎಂಕೆ ಜೊತೆ ಸಂಬಂಧ ಹೊಂದಿದ್ದರು. ಟಿ. ನಗರದಲ್ಲಿರುವ ಬಿಜೆಪಿ ರಾಜ್ಯ ಪ್ರಧಾನ ಕಚೇರಿ ಕಮಲಾಲಯಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದ ಮೊದಲ ಆಕಾಂಕ್ಷಿ ಅವರು. ಅವರನ್ನು ಅವಿರೋಧವಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟದ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ನೈನಾರ್ ನಾಗೇಂದ್ರನ್, ಮುಂಬರುವ 2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಸೋಲಿಸಲು ಎರಡೂ ಪಕ್ಷಗಳು ಪೂರ್ಣ ಹೃದಯದಿಂದ ಕೆಲಸ ಮಾಡುತ್ತವೆ ಎಂದು ಹೇಳಿದರು.
ಚೆನ್ನೈ, ಏಪ್ರಿಲ್ 12: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನೈನಾರ್ ನಾಗೇಂದ್ರನ್ (Nainar Nagendran) ನಾಮಪತ್ರ ಸಲ್ಲಿಸಿದ್ದರು. ಆ ಸ್ಥಾನಕ್ಕೆ ಬೇರಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೈನಾರ್ ನಾಗೇಂದ್ರನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದು ಅಧಿಕೃತವಾಗಿ ಘೋಷಿಸಲಾಯಿತು. ಪಕ್ಷದ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ನೈನಾರ್ ನಾಗೇಂದ್ರನ್ ಅವರಿಗೆ ಸಿಹಿ ತಿನ್ನಿಸಿ ನಿರ್ಗಮಿತ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ ಅಭಿನಂದಿಸಿದ್ದಾರೆ.
ಬಿಜೆಪಿ-ಎಐಎಡಿಎಂಕೆ ಮೈತ್ರಿಕೂಟದ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ನೈನಾರ್ ನಾಗೇಂದ್ರನ್, ಮುಂಬರುವ 2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಸೋಲಿಸಲು ಎರಡೂ ಪಕ್ಷಗಳು ಪೂರ್ಣ ಹೃದಯದಿಂದ ಕೆಲಸ ಮಾಡುತ್ತವೆ ಎಂದು ಹೇಳಿದರು. “ಬಿಜೆಪಿ 1,000ಕ್ಕೂ ಹೆಚ್ಚು ಶಾಸಕರು ಮತ್ತು 300ಕ್ಕೂ ಹೆಚ್ಚು ಸಂಸದರನ್ನು ಹೊಂದಿರುವ ಅತ್ಯಂತ ದೊಡ್ಡ ಪಕ್ಷವಾಗಿದೆ. ಈ ಪಕ್ಷದ ರಾಜ್ಯ ಅಧ್ಯಕ್ಷರಾಗಲು ನನಗೆ ತುಂಬಾ ಹೆಮ್ಮೆಯಿದೆ” ಎಂದು ಹೇಳಿದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ

ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ

ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ

ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
