MPR Vs NKK ; ಪಕ್ಷದ ಸೋಲಿಗೆ ಕಾರಣರಾದ ನಳಿನ್ ಕುಮಾರ್ ಕಟೀಲ್ ಗೆ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ: ಎಂಪಿ ರೇಣುಕಾಚಾರ್ಯ
ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ, ಕೆಎಸ್ ಈಶ್ವರಪ್ಪ, ದಿವಂಗತ ಅನಂತ ಕುಮಾರ್ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸಲಾಯಿತು ಎಂದು ರೇಣುಕಾಚಾರ್ಯ ಹೇಳಿದರು.
ದಾವಣಗೆರೆ: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (MP Renukacharya) ತಮ್ಮ ಪಕ್ಷದ ನಾಯಕರ ವಿರುದ್ಧ ಕಿಡಿ ಕಾರುವುದನ್ನು ಮುಂದುವರಿಸಿದ್ದಾರೆ. ಇಂದು ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ರೇಣುಕಾಚಾರ್ಯ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಟೀಲ್ ನಾಯಕತ್ವದಲ್ಲೇ ಬಿಜೆಪಿ ಗೆ ರಾಜ್ಯದಲ್ಲಿ ಹೀನಾಯ ಸೋಲಾಗಿದ್ದರಿಂದ ಅಧ್ಯಕ್ಷ ಸ್ಥಾನ ಮುಂದುವರಿಯಲು ಅವರಿಗೆ ನೈತಿಕ ಹಕ್ಕಿಲ್ಲ, ಕೂಡಲೇ ರಾಜಿನಾಮೆ ಸಲ್ಲಿಸಬೇಕು ಎಂದು ರೇಣುಕಾಚಾರ್ಯ ಹೇಳಿದರು. ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಇಲ್ಲಸಲ್ಲದ ಆಪಾದನೆಗಳನ್ನು ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವುದು ಕಟೀಲ್ ಗೆ ಆಗಲಿಲ್ಲ ಎಂದು ಹೇಳಿದ ಮಾಜಿ ಶಾಸಕ, ಯಡಿಯೂರಪ್ಪರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು ಬೇಡವೆಂದರೂ ಕಟೀಲ್ ಮತ್ತು ಇತರ ನಾಯಕರು ಕಿವಿಗೆ ಹಾಕಿಕೊಳ್ಳಲಿಲ್ಲ ಎಂದರು. ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಯಡಿಯೂರಪ್ಪ, ಕೆಎಸ್ ಈಶ್ವರಪ್ಪ, ದಿವಂಗತ ಅನಂತ ಕುಮಾರ್ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸಲಾಯಿತು ಎಂದು ರೇಣುಕಾಚಾರ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ