ಲಸಿಕೆ ಹಾಕಿಸಿಕೊಂಡರೆ ಮಕ್ಕಳಾಗಲ್ಲ ಅಂತ ಸಿದ್ದರಾಮಯ್ಯ ಸಲಹೆ ನೀಡಿದ್ದಕ್ಕೆ ರಾಹುಲ್ ಗಾಂಧಿ ಮದುವೆಯಾಗಿಲ್ಲ: ನಳಿನ್ ಕುಮಾರ್ ಕಟೀಲ್
ಸಾರ್ವಜನಿಕ ಸಭೆಯೊಂದರಲ್ಲಿ ಕಟೀಲ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಸಂಸದ ರಾಹುಲ್ ಗಾಂಧಿ ಅವರ ಮೇಲೆ ಜೋಕ್ ಗಳನ್ನು ಕಟ್ ಮಾಡುತ್ತಾ ಜನರನ್ನು ನಗಿಸಿದರು.
ಕೊಪ್ಪಳ: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರು ಜಿಲ್ಲೆಯ ಹಲಗೇರಾ ಗ್ರಾಮದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಮತ್ತು ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಮೇಲೆ ಜೋಕ್ ಗಳನ್ನು ಕಟ್ ಮಾಡುತ್ತಾ ಜನರನ್ನು ನಗಿಸಿದರು. ಸಿದ್ದರಾಮಯ್ಯನವರು ರಾಹುಲ್ ಗಾಂಧಿಗೆ ಲಸಿಕೆ ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಅಂತ ಹೇಳಿದ್ದರಂತೆ. ವಿಧಾನ ಪರಿಷತ್ ಸದಸ್ಯ ಮಂಜಣ್ಣನವರು; ಸಿದ್ದರಾಮಯ್ಯ ಬೇಡವೆಂದರೂ ರಾಹುಲ್ ಲಸಿಕೆ ಹಾಕಿಸಿಕೊಂಡಿದ್ದಾರೆ, ಇನ್ನು ಮದುವೆಯಾದರೂ ಮಕ್ಕಳಾಗುವುದಿಲ್ಲ. ಹಾಗಾಗೇ ರಾಹುಲ್ ಮದುವೆಯಾಗಿಲ್ಲ ಅಂತ ಜೋಕ್ ಮಾಡುತ್ತಿರುತ್ತಾರೆ ಅಂತ ಕಟೀಲ್ ಹೇಳಿದಾಗ ಜನ ನಕ್ಕರು.
ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos