ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್ ಆರೋಪ, ವೈರಲ್ ಆಗ್ತಿದೆ ವಿಡಿಯೋ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಹಜ್ ಯಾತ್ರೆಗೆ ಬೀಳ್ಕೊಡಲು ಬಂದವರು ಸಾಮೂಹಿಕ ನಮಾಜ್ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಘಟನೆ ಸಂಬಂಧಿತ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಏರ್‌ಪೋರ್ಟ್‌ನಂತಹ ಸಾರ್ವಜನಿಕ ಸ್ಥಳಗಳಲ್ಲಿ ಇಂಥದ್ದಕ್ಕೆ ಅವಕಾಶ ನೀಡಬಾರದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ವಿಮಾನ ನಿಲ್ದಾಣ ಆಡಳಿತವಾಗಲೀ ಅಥವಾ ಇತರ ಸಂಬಂಧಪಟ್ಟವರಾಗಲಿ ಈ ಬಗ್ಗೆ ಇನ್ನಷ್ಟೇ ಪ್ರತಿಕ್ರಿಯಿಸಬೇಕಿದೆ.
ಬೆಂಗಳೂರು, ನವೆಂಬರ್ 10: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಸಾಮೂಹಿಕ ನಮಾಜ್ ಮಾಡಿರುವ ಆರೋಪ ಕೇಳಿಬಂದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಹರಿದಾಡಿದೆ. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಹಜ್ ಯಾತ್ರಿಕರನ್ನು ಬೀಳ್ಕೊಡಲು ಬಂದಿದ್ದ ಕೆಲವರು ವಿಮಾನ ನಿಲ್ದಾಣದ ಟರ್ಮಿನಲ್ ಒಳಭಾಗದಲ್ಲೇ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಾಮೂಹಿಕ ನಮಾಜ್ ನಡೆಯುತ್ತಿದ್ದರೂ ಸಿಬ್ಬಂದಿ ನೋಡುತ್ತಾ ಮೌನವಾಗಿದ್ದರು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಮಾನ ನಿಲ್ದಾಣ ಆಡಳಿತದಿಂದ ಈ ಬಗ್ಗೆ ಇನ್ನಷ್ಟೇ ಅಧಿಕೃತ ಪ್ರತಿಕ್ರಿಯೆ ದೊರೆಯಬೇಕಿದೆ.
ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ನಮಾಜ್ ಮಾಡಿದ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ್ದು, ಆ ಬಗ್ಗೆ ನನಗೆ ಮಾಹಿತಿ ಇಲ್ಲ, ಈ ಮಾಹಿತಿ ಪಡೆಯುತ್ತೇನೆ ಎಂದಿದ್ದಾರೆ.
