Video:ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟನೆಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ

Updated on: Jun 15, 2025 | 11:48 AM

ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಕುರಿತಾದ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಕೇರಳದ ವಯನಾಡ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಬೇಕಿದ್ದ ನಾಮಫಲಕವು ಉದ್ಘಾಟನೆಗೊಳ್ಳುವ ಮುನ್ನವೇ ವೇದಿಕೆ ಮೇಲೆ ಮುರಿದುಬಿದ್ದಿರುವ ಘಟನೆ ನಡೆದಿದೆ.

ವಯನಾಡು, ಜೂನ್ 15: ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಕೇರಳದ ವಯನಾಡಿನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅನಾವರಣಗೊಳಿಸಬೇಕಿದ್ದ ನಾಮಫಲಕವು ಉದ್ಘಾಟನೆಗೊಳ್ಳುವ ಮುನ್ನವೇ ವೇದಿಕೆ ಮೇಲೆ ಮುರಿದುಬಿದ್ದಿರುವ ಘಟನೆ ನಡೆದಿದೆ.

ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಪ್ರಿಯಾಂಕಾ ಗಾಂಧಿ ಈ ಅಪಘಾತದ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಘಟನೆಗೆ ಅವರು ಪ್ರತಿಕ್ರಿಯಿಸಿರುವ ವಿಡಿಯೋ ವೈರಲ್ ಆಗುತ್ತಿದೆ. ಹೊಸ ಪುರಸಭೆ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲು ಪ್ರಿಯಾಂಕಾ ಗಾಂಧಿ ವಯನಾಡಿಗೆ ಬಂದಿದ್ದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ