ಜೈಲಿಗೆ ಹೋಗುವಂತೆ ಮಾಡಿದ ಬಿಜೆಪಿ ನಾಯಕರ ಹೆಸರು ಅಲ್ಲಿನ ಗೋಡೆ ಮೇಲೆ ಬರೆದಿರುವೆ: ನಾಗೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Oct 17, 2024 | 6:46 PM

ತನ್ನನ್ನು ವಿನಾಕಾರಣ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಸಿಲುಕಿಸಿದ ಬಿಜೆಪಿ ನಾಯಕರ ಹೆಸರುಗಳನ್ನು ಜೈಲಿನ ಗೋಡೆಯ ಮೇಲೆ ಬರೆದು ಬಂದಿದ್ದೇನೆ, ಮುಂಬರುವ ದಿನಗಳಲ್ಲಿ ಅವರೆಲ್ಲ ಜೈಲು ಸೇರಲಿದ್ದಾರೆ ಎಂದು ನಾಗೇಂದ್ರ ಹೇಳಿದರು. ಅವರ ಮಾತುಗಳು ತೆಲುಗು ಸಿನಿಮಾದ ಡೈಲಾಗ್​​ನಂತಿದ್ದವು!

ಬಳ್ಳಾರಿ: ನಗರದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯ್ರಕ್ರಮದಲ್ಲಿ ಭಾವುಕರಾಗಿ ಮಾತಾಡಿದ ಮಾಜಿ ಸಚಿವ ಬಿ ನಾಗೇಂದ್ರ, ಯಾವುದೇ ತಪ್ಪು ಮಾಡಿರದ ತಾನು ವಾಲ್ಮೀಕಿ ನಿಗಮ ಹಗರಣದಲ್ಲಿ ದೋಷಮುಕ್ತನಾಗಿ ಹೊರಬರುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು. ತಪ್ಪು ಮಾಡಿರದ ತನ್ನ ತಲೆ ಮೇಲೆ ಗೂಬೆ ಕೂರಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದಾರೆ, ಹಲವು ಸಲ ಜೈಲಿಗೆ ಹೋಗಿರುವ ತಾನು ಅದಕ್ಕೆಲ್ಲ ಹೆದರಲ್ಲ, ಆದರೆ ತೊಂದರೆ ಕೊಟ್ಟಿರುವ ಜನರಿಗೆ ಪಶ್ಚಾತ್ತಾಪ ಪಡುವಂತೆ ಮಾಡುತ್ತೇನೆ ಎಂದು ನಾಗೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜನಾರ್ಧನರೆಡ್ಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮ, ಕಲೆ ಕರಗತ ಮಾಡಿಕೊಂಡಿದ್ದಾರೆ: ಬಿ ನಾಗೇಂದ್ರ 

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.