AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಎಸ್​ಟಿ ಮತ್ತು ಆದಾಯ ತೆರಿಗೆ ಪಾವತಿಸುವವರ ಹೆಸರುಗಳು ಮಾತ್ರ ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್: ಲಕ್ಷ್ಮಿ ಹೆಬ್ಬಾಳ್ಕರ್

ಜಿಎಸ್​ಟಿ ಮತ್ತು ಆದಾಯ ತೆರಿಗೆ ಪಾವತಿಸುವವರ ಹೆಸರುಗಳು ಮಾತ್ರ ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್: ಲಕ್ಷ್ಮಿ ಹೆಬ್ಬಾಳ್ಕರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Sep 03, 2024 | 5:21 PM

Share

ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಸಿಎಂ ಕುರ್ಚಿಗಾಗಿ ಹಿರಿಯ ನಾಯಕರ ನಡುವೆ ಪೈಪೋಟಿ ನಡೆದಿದೆ ಎಂಬ ವದಂತಿಯನ್ನು ತಳ್ಳಿಹಾಕಿದ ಲಕ್ಷ್ಮಿ ಹೆಬ್ಬಾಳ್ಕರ್, ಅಂಥದ್ದೇನೂ ಇಲ್ಲ, ಕಾಂಗ್ರೆಸ್ ಒಂದು ಶಿಸ್ತಿನ ಪಕ್ಷ ಮತ್ತು ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳಿದರು.

ತುಮಕೂರು: ಗೃಹಲಕ್ಷ್ಮಿ ಯೋಜನೆ ಅಡಿ ಅರ್ಹ ಫಲಾನುಭವಿಗಳ ಪೈಕಿ ಒಬ್ಬರ ಹೆಸರು ಕೂಡ ಡಿಲೀಟ್ ಆಗಿಲ್ಲ, ಪ್ರಾಯಶಃ ಜಿಎಸ್ ಟಿ ಮತ್ತು ಆದಾಯ ತೆರಿಗೆ ರಿಟರ್ನ್ಸ್ ಫೈಲ್ ಮಾಡುವವರ ಹೆಸರುಗಳು ಮಾತ್ರ ಡಿಲೀಟ್ ಆಗಿರಬಹುದು, ಗಮನಿಸಬೇಕಾದ ಸಂಗತಿಯೇನೆಂದರೆ, ಅರ್ಹರಲ್ಲದ ಮಹಿಳೆಯರ ಹೆಸರುಗಳು ಹೆಸರುಗಳು ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಸಮಯದಲ್ಲೇ ತಿರಸ್ಕೃತಗೊಂಡಿರುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ಹೇಳದೆ ಆ ಯವ್ವ ಏನೇನೋ ಮಾತಾಡ್ತಾರೆ ಎಂದು ಟೀಕಿಸಿದ ರಮೇಶ್ ಜಾರಕಿಹೊಳಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.