ದೇಶದಲ್ಲೇ ನಮ್ಮ ಮೆಟ್ರೋ ಪ್ರಯಾಣ ಬಲು ದುಬಾರಿ: ಪ್ರಯಾಣಿಕರಿಂದ ವ್ಯಾಪಕ ಆಕ್ರೋಶ, ಜನ ಹೇಗೆ ಉಗೀತಿದ್ದಾರೆ ನೋಡಿ

Edited By:

Updated on: Feb 06, 2026 | 12:13 PM

ಬಿಎಂಆರ್‌ಸಿಎಲ್ ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೇ 5ರಷ್ಟು ಹೆಚ್ಚಿಸಿದೆ. ಇದರಿಂದ ಬೆಂಗಳೂರು ಮೆಟ್ರೋ ದೇಶದಲ್ಲೇ ಅತ್ಯಂತ ದುಬಾರಿ ಎನಿಸಿಕೊಂಡಿದೆ. ಈ ದರ ಏರಿಕೆ ಸೋಮವಾರದಿಂದ ಜಾರಿಗೆ ಬರಲಿದೆ. ಮಧ್ಯಮ ವರ್ಗದ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ಮಧ್ಯಪ್ರವೇಶಿಸಿ ದರ ಏರಿಕೆಯನ್ನು ಹಿಂಪಡೆಯುವಂತೆ ಮನವಿ ಆಗ್ರಹಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 6: ನಮ್ಮ ಮೆಟ್ರೋ ಪ್ರಯಾಣ ದರವನ್ನು ಬಿಎಂಆರ್‌ಸಿಎಲ್ ಶೇ 5ರಷ್ಟು ಹೆಚ್ಚಿಸಿದ್ದು, ಇದರಿಂದಾಗಿ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಅಪಖ್ಯಾತಿಗೆ ಬೆಂಗಳೂರು ಮೆಟ್ರೋ ಒಳಗಾಗಿದೆ. ಈ ಪರಿಷ್ಕೃತ ದರಗಳು ಸೋಮವಾರದಿಂದ ಜಾರಿಗೆ ಬರಲಿವೆ. ದೆಹಲಿ, ಚೆನ್ನೈ, ಮುಂಬೈ ಸೇರಿದಂತೆ ಇತರ ಪ್ರಮುಖ ನಗರಗಳ ಮೆಟ್ರೋ ವ್ಯವಸ್ಥೆಗಳಿಗೆ ಹೋಲಿಸಿದರೆ ಬೆಂಗಳೂರಿನ ನಮ್ಮ ಮೆಟ್ರೋ ಟಿಕೆಟ್ ದರ ಈಗ ಗಣನೀಯವಾಗಿ ಹೆಚ್ಚಾಗಿದೆ. ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಬಳಿ ‘ಟಿವಿ9’ ಜತೆ ಮಾತನಾಡಿದ ಪ್ರಯಾಣಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಮ ವರ್ಗದ ಜನರ ಮೇಲೆ ಈ ದರ ಏರಿಕೆ ದೊಡ್ಡ ಹೊರೆಯಾಗಲಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಗಮನ ಹರಿಸಿ ದರ ಏರಿಕೆಯನ್ನು ತಡೆಹಿಡಿಯಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ. ಪದೇ ಪದೇ ದರ ಏರಿಸುವುದರಿಂದ ಜನಸಾಮಾನ್ಯರ ಬದುಕಿಗೆ ಕಷ್ಟವಾಗುತ್ತದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 06, 2026 12:03 PM
Follow Us
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More