AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ ಗೌಡ

ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ ಗೌಡ

ಮಂಗಳ ರಾಜ್
| Edited By: |

Updated on: Jun 11, 2025 | 8:41 PM

Share

‘ಜೀ ಕನ್ನಡ’ ವಾಹಿನಿಯಲ್ಲಿ ‘ಕರ್ಣ’ ಸೀರಿಯಲ್ ಪ್ರಸಾರಕ್ಕೆ ದಿನಗಣನೆ ಆರಂಭ ಆಗಿದೆ. ಈ ಹೊಸ ಧಾರಾವಾಹಿಯಲ್ಲಿ ಕಿರಣ್ ರಾಜ್, ಭವ್ಯಾ ಗೌಡ ಮತ್ತು ನಮ್ರತಾ ಗೌಡ ಅವರು ನಟಿಸುತ್ತಿದ್ದಾರೆ. ಈ ಕುರಿತು ನಮ್ರತಾ ಗೌಡ ಕೆಲವು ಸ್ಪಷ್ಟನೆಗಳನ್ನು ನೀಡಿದ್ದಾರೆ. ಧಾರಾವಾಹಿಯ ಪಾತ್ರವರ್ಗದ ಕುರಿತು ಹರಡಿರುವ ಗಾಸಿಪ್ಗಳಿಗೆ ತೆರೆ ಎಳೆದಿದ್ದಾರೆ.

ಜೀ ಕನ್ನಡದಲ್ಲಿ ‘ಕರ್ಣ’ ಧಾರಾವಾಹಿ (Karna Serial) ಪ್ರಸಾರಕ್ಕೆ ದಿನಗಣನೆ ಶುರುವಾಗಿದೆ. ಈ ಹೊಸ ಧಾರಾವಾಹಿಯಲ್ಲಿ ಕಿರಣ್ ರಾಜ್, ಭವ್ಯಾ ಗೌಡ, ನಮ್ರತಾ ಗೌಡ ನಟಿಸುತ್ತಿದ್ದಾರೆ. ಈ ಕುರಿತು ನಮ್ರತಾ ಗೌಡ (Namratha Gowda) ಅವರು ಕೆಲವು ಸ್ಪಷ್ಟನೆಗಳನ್ನು ನೀಡಿದ್ದಾರೆ. ಪಾತ್ರವರ್ಗದ ಬಗ್ಗೆ ಇದ್ದ ಗಾಸಿಪ್ಗಳಿಗೆ ಅವರು ತೆರೆ ಎಳೆದಿದ್ದಾರೆ. ‘ಕಿರಣ್ ರಾಜ್-ಭ್ಯವಾ ಜೋಡಿ, ನಮ್ರತಾ ಗೌಡ-ಕಾರ್ತಿಕ್ ಮಹೇಶ್ ಜೋಡಿ ಅಂತ ಮೊನ್ನೆಯಿಂದ ಎಲ್ಲ ಕಡೆಗಳಲ್ಲಿ ಗಾಸಿಪ್ ಹರಡಿದೆ. ಅದನ್ನು ನಾನು ಮೊದಲೇ ಸ್ಪಷ್ಟಪಡಿಸುತ್ತೇನೆ. ಅದು ಸಂಪೂರ್ಣ ಸುಳ್ಳು ಸುದ್ದಿ. ಈ ಧಾರಾವಾಹಿಯಲ್ಲಿ ನಾನು ಯಾರಿಗೆ ಜೋಡಿಯಾಗುತ್ತೇನೆ ಎಂಬುದೇ ಸರ್ಪ್ರೈಸ್’ ಎಂದು ನಮ್ರತಾ ಗೌಡ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂಗಳ ರಾಜ್
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More