ವಿನಯ್​​ನ ವಹಿಸಿಕೊಂಡು ಬಂದ ಸ್ನೇಹಿತ್​ಗೆ ನಮ್ರತಾ ಖಡಕ್ ಪ್ರಶ್ನೆ; ಮರುಮಾತೇ ಇಲ್ಲ

Updated on: Jan 17, 2024 | 8:38 AM

ಯಾರು ಗೆಲ್ಲಬೇಕು ಎನ್ನುವ ವಿಚಾರ ಬಂದಾಗ ಸ್ನೇಹಿತ್ ಅವರು ವಿನಯ್ ಹೆಸರನ್ನು ಆಯ್ಕೆ ಮಾಡಿಕೊಂಡಿದ್ದಾರೆ. ತಮ್ಮ ಹೆಸರನ್ನು ಏಕೆ ತೆಗೆದುಕೊಂಡಿಲ್ಲ ಎನ್ನುವ ಬಗ್ಗೆ ನಮ್ರತಾ ಪ್ರಶ್ನೆ ಮಾಡಿದ್ದಾರೆ.

ವಿನಯ್ ಗೌಡ ಅವರ ಜೊತೆ ಸ್ನೇಹಿತ್ ಅವರು ಒಳ್ಳೆಯ ಫ್ರೆಂಡ್​ಶಿಪ್ ಇಟ್ಟುಕೊಂಡಿದ್ದರು. ಎಲಿಮಿನೇಟ್ ಆಗಿ ಹೊರಗೆ ಹೋದ ಬಳಿಕವೂ ಇದನ್ನು ಅವರು ಮರೆತಿಲ್ಲ. ಎಲಿಮಿನೇಟ್ ಆದ ಎಲ್ಲಾ ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಈ ವೇಳೆ ಯಾರು ಗೆಲ್ಲಬೇಕು ಎನ್ನುವ ವಿಚಾರ ಬಂದಾಗ ಸ್ನೇಹಿತ್ (Snehith Gowda) ಅವರು ವಿನಯ್ ಹೆಸರನ್ನು ತೆಗೆದುಕೊಂಡಿದ್ದಾರೆ. ತಮ್ಮ ಹೆಸರನ್ನು ಏಕೆ ತೆಗೆದುಕೊಂಡಿಲ್ಲ ಎನ್ನುವ ಬಗ್ಗೆ ನಮ್ರತಾ ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸ್ನೇಹಿತ್ ಉತ್ತರಿಸಿದ್ದಾರೆ. ಆ ಬಳಿಕ ನಮ್ರತಾ (Namratha Gowda) ಮತ್ತೆ ಪ್ರಶ್ನೆ ಕೇಳಿದ್ದಾರೆ. ಅವರು ಕೇಳುತ್ತಿದ್ದ ಪ್ರಶ್ನೆಗಳಿಗೆ ಸ್ನೇಹಿತ್ ಅವರಿಗೆ ಏನು ಹೇಳಬೇಕು ಅನ್ನೋದೇ ಗೊತ್ತಾಗಲಿಲ್ಲ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಇಂದು (ಜನವರಿ 17) ಈ ಎಪಿಸೋಡ್ ಪ್ರಸಾರ ಕಾಣಲಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More