ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..

Updated on: Apr 28, 2025 | 10:36 PM

ನಟ ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಸಾಂಪ್ರದಾಯಿಕ ಉಡುಗೆ ಧರಿಸಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ಟಾಲಿವುಡ್​ನಲ್ಲಿ ಬಾಲಯ್ಯ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಿನಿಮಾಗಳಲ್ಲಿ ಅವರ ಗತ್ತು ಗಮ್ಮತ್ತು ನೋಡಿ ಫ್ಯಾನ್ಸ್ ಖುಷಿಪಡುತ್ತಾರೆ. ಬಾಲಯ್ಯ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು.

ಟಾಲಿವುಡ್ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರಿಗೆ ಇಂದು (ಏಪ್ರಿಲ್ 28) ಪದ್ಮ ಭೂಷಣ (Padma Bhushan) ಪ್ರಶಸ್ತಿ ನೀಡಲಾಗಿದೆ. ಸಾಂಪ್ರದಾಯಿಕ ಉಡುಗೆ ಧರಿಸಿ ಅವರು ಈ ಪ್ರಶಸ್ತಿ ಸ್ವೀಕರಿಸಿದ್ದಾರೆ. ತೆಲುಗು ಚಿತ್ರರಂಗದಲ್ಲಿ ಬಾಲಯ್ಯ (Balayya) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಮಾಸ್ ಸಿನಿಮಾಗಳಲ್ಲಿ ಅವರ ಮ್ಯಾನರಿಸಂ ನೋಡಿ ಫ್ಯಾನ್ಸ್ ಖುಷಿಪಡುತ್ತಾರೆ. ನಂದಮೂರಿ ಬಾಲಕೃಷ್ಣ ಅವರಿಗೆ ಇರುವ ಅಭಿಮಾನಿ ಬಳಗ ದೊಡ್ಡದು. ಪದ್ಮ ಭೂಷಣ ಪ್ರಶಸ್ತಿ ಪಡೆದ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More