PM Narendra Modi’s visit: ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಂದಿ ಗಿರಿಧಾಮಕ್ಕೆ 2 ದಿನ ಸಾರ್ವಜನಿಕರ ಪ್ರವೇಶ ನಿಷೇಧ
ನಿರ್ಬಂಧವು ಇಂದು ಬೆಳಗ್ಗೆ 10 ಗಂಟೆಯಿಂದ ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಇರುತ್ತದೆ. ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಭದ್ರತಾ ದಳದವರ ಓಡಾಟ ಸರಾಗವಾಗಿರಲಿ ಎಂಬ ಉದ್ದೇಶದಿಂದ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.
ಚಿಕ್ಕಬಳ್ಳಾಪುರ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (PM Narendra Modi) ನಾಳೆ ಮತ್ತೊಮ್ಮೊ ರಾಜ್ಯಕ್ಕೆ ಆಗಮಿಸಲಿದ್ದು ಜಿಲ್ಲೆಯ ಮುದ್ದೇನಹಳ್ಳಿ (Muddenahalli) ಬಳಿ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಿಸಲಾಗಿರುವ ಶ್ರೀ ಮಧುಸೂದನ್ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವಾಸಿ ತಾಣವಾಗಿರುವ ನಂದಿ ಗಿರಿಧಾಮಕ್ಕೆ (Nandi Hills) ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ. ನಿರ್ಬಂಧವು ಇಂದು ಬೆಳಗ್ಗೆ 10 ಗಂಟೆಯಿಂದ ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಇರುತ್ತದೆ. ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಭದ್ರತಾ ದಳದವರ ಓಡಾಟ ಸರಾಗವಾಗಿರಲಿ ಎಂಬ ಉದ್ದೇಶದಿಂದ ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 24, 2023 10:24 AM
Latest Videos