ವೀಕೆಂಡ್ ಮಸ್ತಿ; ಬೆಳ್ಳಂಬೆಳಗ್ಗೆ ನಂದಿಗಿರಿಧಾಮಕ್ಕೆ ಹರಿದು ಬಂದ ಪ್ರವಾಸಿಗರ ದಂಡು

| Updated By: ಆಯೇಷಾ ಬಾನು

Updated on: Sep 10, 2023 | 7:37 AM

ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟಕ್ಕೆ ಮುಂಜಾನೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ನಂದಿಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮನಸೋತ ಪ್ರವಾಸಿಗರು ಬೆಳಗ್ಗೆ 5 ಗಂಟೆಯಿಂದಲೇ ಲಗ್ಗೆಯಿಟ್ಟಿದ್ದು ಬೆಳಗ್ಗೆ 6 ಗಂಟೆಗೆಯೇ ಪಾರ್ಕಿಂಗ್ ಹೌಸ್ ಫುಲ್​​ ಆಗಿದೆ.

ಚಿಕ್ಕಬಳ್ಳಾಪುರ, ಸೆ.10: ವೀಕೆಂಡ್ ಹಿನ್ನೆಲೆ ಬೆಳ್ಳಂಬೆಳಗ್ಗೆ ನಂದಿಗಿರಿಧಾಮಕ್ಕೆ(Nandi Hills) ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟಕ್ಕೆ ಮುಂಜಾನೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದಾರೆ. ನಂದಿಗಿರಿಧಾಮದ ಪ್ರಕೃತಿ ಸೌಂದರ್ಯಕ್ಕೆ ಮನಸೋತ ಪ್ರವಾಸಿಗರು ಬೆಳಗ್ಗೆ 5 ಗಂಟೆಯಿಂದಲೇ ಲಗ್ಗೆಯಿಟ್ಟಿದ್ದು ಬೆಳಗ್ಗೆ 6 ಗಂಟೆಗೆಯೇ ಪಾರ್ಕಿಂಗ್ ಹೌಸ್ ಫುಲ್​​ ಆಗಿದೆ.

ಪ್ರಕೃತಿ ಪ್ರಿಯರಿಗೆ, ಪ್ರೇಮಿಗಳಿಗೆ, ಫ್ಯಾಮಿಲಿ ಔಟಿಂಗ್​ಗೆ ನಂದಿಬೆಟ್ಟ ಹೇಳು ಮಾಡಿಸಿದ ಜಾಗ. ವೀಕೆಂಡ್ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಜನ ನಂದಿಬೆಟ್ಟಕ್ಕೆ ಲಗ್ಗೆ ಇಟ್ಟಿದ್ದು ಟ್ರಾಫಿಕ್ ಜಾಮ್ ಸಮಸ್ಯೆ, ಪಾರ್ಕಿಂಗ್ ಸಮಸ್ಯೆ ಎದುರಾಗಿದೆ. ಇದು ಕೆಲ ಪ್ರವಾಸಿಗರಿಗೆ ಕಿರಿಕಿರಿ ಉಂಟು ಮಾಡಿದೆ.