AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಜನತೆಗೆ ಮತ್ತೊಂದು ಶಾಕ್​​: ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವೂ ಲೀಟರ್​​ಗೆ​​ 14 ರೂ.ಹೆಚ್ಚಳ

ರಾಜ್ಯದ ಜನತೆಗೆ ಮತ್ತೊಂದು ಶಾಕ್​​: ಹಾಲಿನ ದರ ಏರಿಕೆ ಬೆನ್ನಲ್ಲೇ ಮೊಸರಿನ ದರವೂ ಲೀಟರ್​​ಗೆ​​ 14 ರೂ.ಹೆಚ್ಚಳ

ಪ್ರದೀಪ್​ ಚಿಕ್ಕಾಟಿ
| Edited By: |

Updated on:Oct 31, 2026 | 7:02 AM

Share

ನಂದಿನಿ ಹಾಲಿನ ಬೆಲೆ ಏರಿಕೆಯ ಬೆನ್ನಲ್ಲೇ ಮೊಸರಿನ ದರವೂ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, 1 ಲೀಟರ್​​ ಮೊಸರಿನ ಬೆಲೆ ₹14 ಹಾಗೂ ಅರ್ಧ ಲೀಟರ್​​ ಪ್ಯಾಕೆಟ್ ಬೆಲೆ ₹6 ಏರಿಕೆಯಾಗಿದೆ. ಈಗಾಗಲೇ ನಂದಿನಿ ಹಾಲಿನ ದರ ಲೀಟರ್​​ಗೆ ₹8 ಏರಿಕೆಗೆ ನಿರ್ಧರಿಸಲಾಗಿದ್ದು, ನಂದಿನಿ ಹಾಲು ಮತ್ತು ಮೊಸರಿನ ಈ ಪರಿಷ್ಕೃತ ದರ ನಾಳೆಯಿಂದಲೇ ರಾಜ್ಯದಲ್ಲಿ ಜಾರಿಗೆ ಬರಲಿದೆ.

ಬೆಂಗಳೂರು, ಅಕ್ಟೋಬರ್​​ 31: ಹಾಲಿನ ದರ ಏರಿಕೆ ಬೆನ್ನಲ್ಲೇ ಅದರ ಉತ್ಪನ್ನಗಳ ಬೆಲೆಯಲ್ಲೂ ಹೆಚ್ಚಳವಾಗ್ತಿದ್ದು, ಮೊಸರಿನ ಬೆಲೆಯಲ್ಲೂ ಗಣನೀಯ ಏರಿಕೆಯಾಗಿದೆ. ಲೀಟರ್​​ಗೆ​​ ಮೊಸರಿನ ಬೆಲೆ ₹54 ರಿಂದ ₹68ಕ್ಕೆ ಹೆಚ್ಚಿದ್ದು, ಬರೋಬ್ಬರಿ 14 ರೂಪಾಯಿ ಏರಿಕೆ ಕಂಡಿದೆ. ಅರ್ಧ ಲೀಟರ್​​ ಮೊಸರಿನ ಪ್ಯಾಕೆಟ್ ಬೆಲೆಯಲ್ಲಿ 6 ರೂಪಾಯಿ ಹೆಚ್ಚಳವಾಗಿದ್ದು, ₹28 ರಿಂದ ₹34ಕ್ಕೆ ತಲುಪಿದೆ. ಈಗಾಗಲೇ ನಂದಿನಿ ಹಾಲಿನ ದರ ಲೀಟರ್​​ಗೆ ₹8 ಏರಿಕೆಗೆ ನಿರ್ಧರಿಸಲಾಗಿದ್ದು, ನಂದಿನಿ ಹಾಲು ಮತ್ತು ಮೊಸರಿನ ಈ ಪರಿಷ್ಕೃತ ದರ ನಾಳೆಯಿಂದಲೇ ರಾಜ್ಯದಲ್ಲಿ ಜಾರಿಗೆ ಬರಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 31, 2026 06:42 AM

Follow Us
ಪ್ರದೀಪ್​ ಚಿಕ್ಕಾಟಿ
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More