ಕರ್ನಾಟಕದ ಜನತೆಗೆ ಮತ್ತೊಂದು ದರ ಏರಿಕೆ ಬರೆ: ನಂದಿನಿ ಹಾಲಿನ ದರ ಹೆಚ್ಚಳ ಬಹುತೇಕ ಖಚಿತ

Updated on: Sep 26, 2026 | 6:53 AM

ನಂದಿನಿ ಹಾಲಿನ ದರ ಲೀಟರ್‌ಗೆ 4-5 ರೂಪಾಯಿ ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ ನಂತರ ದರ ಏರಿಕೆಯ ಕುರಿತು ಇಂದು ಅಧಿಕೃತ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಒಕ್ಕೂಟದ ಸಮಸ್ಯೆಗಳು, ಆಡಳಿತ ವೆಚ್ಚ, ಉತ್ಪಾದನೆ ಸೇರಿ ರೈತರ ಹಿತ ಕಾಪಾಡುವ ಉದ್ದೇಶದಿಂದ ದರ ಏರಿಕೆಗೆ ನಿರ್ಧಾರ ಎನ್ನಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​​ 26: ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಲೀಟರ್‌ಗೆ 4 ರಿಂದ 5 ರೂಪಾಯಿ ಹೆಚ್ಚಳವಾಗುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಇಂದು ಅಧಿಕೃತ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಹಾಲಿನ ದರ ಕನಿಷ್ಠ 10 ರೂ. ಹೆಚ್ಚಿಸುವಂತೆ ಇಂದು ಸಿಎಂ ಡಿ.ಕೆ.ಶಿವಕುಮಾರ್​ಗೆ ಹಾಲು ಒಕ್ಕೂಟಗಳು ಮನವಿ ಸಲ್ಲಿಸಲಿವೆ. ಕನಿಷ್ಠ 10 ರೂ. ಹೆಚ್ಚಳ ಮಾಡಲು ರೈತರು ಬೇಡಿಕೆ ಇಟ್ಟಿದ್ದಾರೆ. ಒಕ್ಕೂಟದ ಸಮಸ್ಯೆಗಳು, ಆಡಳಿತ ವೆಚ್ಚ, ಉತ್ಪಾದನೆ ಸೇರಿ ರೈತರ ಹಿತ ಕಾಪಾಡುವ ಉದ್ದೇಶದಿಂದ ದರ ಏರಿಕೆಗೆ ನಿರ್ಧಾರ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Sep 26, 2026 06:52 AM
Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More