‘ಪಕ್ಕದ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮಲ್ಲಿ ದರ ಕಡಿಮೆ’: ನಂದಿನಿ ಹಾಲಿನ ಬೆಲೆ ಹೆಚ್ಚಳಕ್ಕೆ ಸಿಎಂ ಡಿಕೆ ಶಿವಕುಮಾರ್ ಸಮರ್ಥನೆ
ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಇದು ರೈತರ ಹಿತದೃಷ್ಟಿಯಿಂದ ಕೈಗೊಂಡಿರುವ ನಿರ್ಧಾರ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಳೆದ ಒಂದು-ಎರಡು ವರ್ಷಗಳಿಂದ ಹಾಲಿನ ಬೆಲೆ ಏರಿಕೆಗೆ ಬೇಡಿಕೆಯಿತ್ತು. ಡೀಸೆಲ್, ಪೆಟ್ರೋಲ್ ದರ ಹೆಚ್ಚಳ, ವಾಹನ ಮತ್ತು ಪ್ಲಾಸ್ಟಿಕ್ ಕವರ್ ಬೆಲೆ ಏರಿಕೆಯಿಂದ ಹಾಲಿನ ಸಾಗಾಟ ಹಾಗೂ ಉತ್ಪಾದನಾ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ ಎಂದವರು ಹೇಳಿದ್ದಾರೆ.
ಬೆಂಗಳೂರು, ಅಕ್ಟೋಬರ್ 29: ನವೆಂಬರ್ 1ರಿಂದ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 8 ರೂ. ಹೆಚ್ಚಳ ಸಂಬಂಧ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಕಳೆದ 1-2 ವರ್ಷದಿಂದ ಹಾಲಿನ ದರ ಹೆಚ್ಚಳಕ್ಕೆ ಬೇಡಿಕೆಯಿತ್ತು. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ವಸ್ತುಗಳ ದರ ಹೆಚ್ಚಾಗಿದೆ. ಹಾಲು ಒಕ್ಕೂಟಗಳಿಂದ 12-15 ರೂ. ಹೆಚ್ಚುಸುವಂತೆ ಒತ್ತಡವಿತ್ತು. ಕೊನೆಗೆ ಎಲ್ಲರ ಜೊತೆ ಚರ್ಚೆಮಾಡಿ 8 ರೂ. ಹೆಚ್ಚಳ ಮಾಡಿರುವೆ. ಪಕ್ಕದ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದವರು ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಕೇವಲ ಹಾಲು ಮಾತ್ರವಲ್ಲ ಅದರ ಉತ್ಪನ್ನಗಳ ಬೆಲೆನೂ ಜಾಸ್ತಿ ಆಗುತ್ತೆ: ಸವದಿ
ಹಾಲು ಬೆನ್ನಲ್ಲೇ ಬಸ್ ಟಿಕೆಟ್ ದರ ಹೆಚ್ಚಳ:ಬಿಗ್ ಅಪ್ಡೇಟ್ ನೀಡಿದ ಸಚಿವ
ಜೈಲಿನಿಂದ ಕೊಟ್ಟ ಸಂದೇಶಕ್ಕೆ ತಲೆ ಕೆಡಿಸಿಕೊಳ್ಳಬೇಕಿಲ್ಲ: ಧನ್ವೀರ್ ಲಾಯರ್
ಸಿದ್ದರಾಮಯ್ಯ ಈಸ್ ಬ್ಯಾಕ್: ಅಹಿಂದ ಹಳೆ ಅಸ್ತ್ರಕ್ಕೆ ಸಾಣೆ ಹಿಡಿಯಲು ಸಿದ್ದತೆ

