‘ಪಕ್ಕದ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮಲ್ಲಿ ದರ ಕಡಿಮೆ’: ನಂದಿನಿ ಹಾಲಿನ ಬೆಲೆ ಹೆಚ್ಚಳಕ್ಕೆ ಸಿಎಂ ಡಿಕೆ ಶಿವಕುಮಾರ್​​ ಸಮರ್ಥನೆ

Edited By:

Updated on: Oct 29, 2026 | 7:38 PM

ಕರ್ನಾಟಕದಲ್ಲಿ ನಂದಿನಿ ಹಾಲಿನ ದರ ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಇದು ರೈತರ ಹಿತದೃಷ್ಟಿಯಿಂದ ಕೈಗೊಂಡಿರುವ ನಿರ್ಧಾರ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಳೆದ ಒಂದು-ಎರಡು ವರ್ಷಗಳಿಂದ ಹಾಲಿನ ಬೆಲೆ ಏರಿಕೆಗೆ ಬೇಡಿಕೆಯಿತ್ತು. ಡೀಸೆಲ್, ಪೆಟ್ರೋಲ್ ದರ ಹೆಚ್ಚಳ, ವಾಹನ ಮತ್ತು ಪ್ಲಾಸ್ಟಿಕ್ ಕವರ್ ಬೆಲೆ ಏರಿಕೆಯಿಂದ ಹಾಲಿನ ಸಾಗಾಟ ಹಾಗೂ ಉತ್ಪಾದನಾ ವೆಚ್ಚ ಗಣನೀಯವಾಗಿ ಏರಿಕೆಯಾಗಿದೆ ಎಂದವರು ಹೇಳಿದ್ದಾರೆ.

ಬೆಂಗಳೂರು, ಅಕ್ಟೋಬರ್​​ 29: ನವೆಂಬರ್​​ 1ರಿಂದ ನಂದಿನಿ ಹಾಲಿನ ದರ ಪ್ರತಿ ಲೀಟರ್​ಗೆ 8 ರೂ. ಹೆಚ್ಚಳ ಸಂಬಂಧ ಸಿಎಂ ಡಿಕೆ ಶಿವಕುಮಾರ್​​ ಪ್ರತಿಕ್ರಿಯಿಸಿದ್ದಾರೆ. ಕಳೆದ 1-2 ವರ್ಷದಿಂದ ಹಾಲಿನ ದರ ಹೆಚ್ಚಳಕ್ಕೆ ಬೇಡಿಕೆಯಿತ್ತು. ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲಾ ವಸ್ತುಗಳ ದರ ಹೆಚ್ಚಾಗಿದೆ. ಹಾಲು ಒಕ್ಕೂಟಗಳಿಂದ 12-15 ರೂ. ಹೆಚ್ಚುಸುವಂತೆ ಒತ್ತಡವಿತ್ತು. ಕೊನೆಗೆ ಎಲ್ಲರ ಜೊತೆ ಚರ್ಚೆಮಾಡಿ 8 ರೂ. ಹೆಚ್ಚಳ ಮಾಡಿರುವೆ. ಪಕ್ಕದ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More