ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು

Updated on: Apr 30, 2025 | 10:39 AM

Natural star Nani: ನ್ಯಾಚುರಲ್ ಸ್ಟಾರ್ ನಾನಿ ಟಿವಿ9 ಜೊತೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದು, ಕನ್ನಡದ ಸ್ಟಾರ್ ನಟರಾದ ಸುದೀಪ್ ಹಾಗೂ ಶಿವಣ್ಣ ಅವರೊಟ್ಟಿಗೆ ತಮಗಿರುವ ಗೆಳೆತನದ ಬಗ್ಗೆ ಮಾತನಾಡಿದ್ದಾರೆ. ಸುದೀಪ್ ಹಾಗೂ ಶಿವಣ್ಣ ತಮಗೆ ಸದಾ ಬೆಂಬಲ ನೀಡುತ್ತಾ ಬಂದಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ತೆಲುಗಿನ ಸ್ಟಾರ್ ನಟ ನಾನಿ (Nani) ಬೆಂಗಳೂರಿಗೆ ಬಂದಿದ್ದಾರೆ. ಅವರ ನಟನೆಯ ‘ಹಿಟ್ 3’ ಸಿನಿಮಾ ಇದೇ ಗುರುವಾರ ತೆರೆಗೆ ಬರಲಿದೆ. ಸಿನಿಮಾದ ಪ್ರಚಾರದಲ್ಲಿರುವ ನಾನಿ ಟಿವಿ9 ಜೊತೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದು, ಕನ್ನಡದ ಸ್ಟಾರ್ ನಟರಾದ ಸುದೀಪ್ ಹಾಗೂ ಶಿವಣ್ಣ ಅವರೊಟ್ಟಿಗೆ ತಮಗಿರುವ ಗೆಳೆತನದ ಬಗ್ಗೆ ಮಾತನಾಡಿದ್ದಾರೆ. ಸುದೀಪ್ ಹಾಗೂ ಶಿವಣ್ಣ ತಮಗೆ ಸದಾ ಬೆಂಬಲ ನೀಡುತ್ತಾ ಬಂದಿದ್ದಾರೆ ಎಂದು ನಾನಿ ಹೇಳಿಕೊಂಡಿದ್ದಾರೆ. ‘ಹಿಟ್ 3’ ಸಿನಿಮಾದಲ್ಲಿ ನಾನಿ ಜೊತೆಗೆ ಕನ್ನಡತಿ ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ. ಇದೊಂದು ಪಕ್ಕಾ ಆಕ್ಷನ್ ಸಿನಿಮಾ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 29, 2025 07:23 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More