AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ

ಮೈಸೂರು: ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ

ರಾಮ್​, ಮೈಸೂರು
| Edited By: |

Updated on: Nov 12, 2026 | 8:29 AM

Share

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆದ ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಪಟಾಕಿ ಸಿಡಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದೆ. ಈ ಘರ್ಷಣೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ರಥೋತ್ಸವವು ಅರ್ಧಕ್ಕೆ ನಿಂತಿದೆ. ಘಟನೆ ನಂತರ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮೈಸೂರು, ನವೆಂಬರ್ 12: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಕಲ್ಲುತೂರಾಟ ನಡೆದಿದೆ. ಪಟಾಕಿ ಸಿಡಿಸುವ ವಿಚಾರಕ್ಕೆ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಘರ್ಷಣೆಗೆ ಕಾರಣವಾಗಿದೆ. ಬೆಟ್ಟದಿಂದ ಆಗಮಿಸುತ್ತಿದ್ದ ಸಿದ್ದೇಶ್ವರ ಸ್ವಾಮಿ ರಥೋತ್ಸವದ ಸಂದರ್ಭದಲ್ಲಿ ಈ ಅಹಿತಕರ ಘಟನೆ ನಡೆದಿದೆ. ಕಲ್ಲುತೂರಾಟದಿಂದ ಆನಂದ್, ಭರತ್, ಅಭಿ ಸೇರಿದಂತೆ ಹಲವು ಮಂದಿಗೆ ಗಾಯಗಳಾಗಿವೆ. ಘರ್ಷಣೆಯ ಪರಿಣಾಮವಾಗಿ, ಸಾಗುತ್ತಿದ್ದ ರಥೋತ್ಸವವು ಅರ್ಧಕ್ಕೆ ನಿಂತುಹೋಗಿದೆ.

ಗ್ರಾಮದ ಸಮುದಾಯ ಅರಳಿಮರದ ಹತ್ತಿರ ರಥ ಬಂದಾಗ ಪಟಾಕಿ ಸಿಡಿಸುವ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿ, ಅದು ದೊಡ್ಡ ಗಲಾಟೆಗೆ ಕಾರಣವಾಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಕಾರಣ, ಜಾತ್ರಾ ಮಹೋತ್ಸವಕ್ಕೆ ಅಡಚಣೆಯಾಯಿತು. ಘಟನೆ ನಡೆದ ನಂತರ ಕಾರ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಈ ಘಟನೆಯಿಂದಾಗಿ ಜಾತ್ರೆಯ ಸಂಭ್ರಮಕ್ಕೆ ಅಡ್ಡಿಯುಂಟಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More