Video: ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ

Updated on: Feb 19, 2026 | 10:03 AM

ಇಂದು ದೆಹಲಿಯಲ್ಲಿ ಎಐ ಇಂಪ್ಯಾಕ್ಟ್​ ಶೃಂಗಸಭೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಜತೆ ಕುಳಿತು ಚರ್ಚಿಸುತ್ತಿರುವ ವಿಡಿಯೋ ಇಲ್ಲಿದೆ.  ಸಿಇಒಗಳು, ಸಿಎಕ್ಸ್‌ಒಗಳು ಸೇರಿದಂತೆ 500 ಕ್ಕೂ ಹೆಚ್ಚು ಜಾಗತಿಕ ಎಐ ನಾಯಕರು, ಸುಮಾರು 100 ಸಿಇಒಗಳು ಮತ್ತು ಸಂಸ್ಥಾಪಕರು, 150 ಶಿಕ್ಷಣ ತಜ್ಞರು ಮತ್ತು ಸಂಶೋಧಕರು ಮತ್ತು 400 ಸಿಟಿಒಗಳು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದು 20 ಕ್ಕೂ ಹೆಚ್ಚು ರಾಜ್ಯ ಮತ್ತು ಸರ್ಕಾರದ ಮುಖ್ಯಸ್ಥರು ಮತ್ತು ಸುಮಾರು 60 ಮಂತ್ರಿಗಳು, ಉಪಮಂತ್ರಿಗಳು ಸೇರಿದಂತೆ 100 ಕ್ಕೂ ಹೆಚ್ಚು ಸರ್ಕಾರಿ ಪ್ರತಿನಿಧಿಗಳು ಇರಲಿದ್ದಾರೆ.

ನವದೆಹಲಿ, ಫೆಬ್ರವರಿ 19: ಇಂದು ದೆಹಲಿಯಲ್ಲಿ ಎಐ ಇಂಪ್ಯಾಕ್ಟ್​ ಶೃಂಗಸಭೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ವಿಶ್ವ ನಾಯಕರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಜತೆ ಕುಳಿತು ಚರ್ಚಿಸುತ್ತಿರುವ ವಿಡಿಯೋ ಇಲ್ಲಿದೆ.  ಸಿಇಒಗಳು, ಸಿಎಕ್ಸ್‌ಒಗಳು ಸೇರಿದಂತೆ 500 ಕ್ಕೂ ಹೆಚ್ಚು ಜಾಗತಿಕ ಎಐ ನಾಯಕರು, ಸುಮಾರು 100 ಸಿಇಒಗಳು ಮತ್ತು ಸಂಸ್ಥಾಪಕರು, 150 ಶಿಕ್ಷಣ ತಜ್ಞರು ಮತ್ತು ಸಂಶೋಧಕರು ಮತ್ತು 400 ಸಿಟಿಒಗಳು ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದು 20 ಕ್ಕೂ ಹೆಚ್ಚು ರಾಜ್ಯ ಮತ್ತು ಸರ್ಕಾರದ ಮುಖ್ಯಸ್ಥರು ಮತ್ತು ಸುಮಾರು 60 ಮಂತ್ರಿಗಳು, ಉಪಮಂತ್ರಿಗಳು ಸೇರಿದಂತೆ 100 ಕ್ಕೂ ಹೆಚ್ಚು ಸರ್ಕಾರಿ ಪ್ರತಿನಿಧಿಗಳು ಇರಲಿದ್ದಾರೆ.

ಮತ್ತೊಂದೆಡೆ, ದೆಹಲಿಯಲ್ಲಿ ನಡೆಯುತ್ತಿರುವ ಜಾಗತಿಕ ಎಐ ಶೃಂಗದಲ್ಲಿ ಇದೀಗ ಗಿನ್ನೆಸ್‌ ವಿಶ್ವದಾಖಲೆ ಬರೆಯಲು ಸಿದ್ಧವಾಗಿದೆ. ಈ ಶೃಂಗದಲ್ಲಿ ಕೇವಲ 24 ಗಂಟೆಗಳಲ್ಲಿ 2.5 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಕೃತಕ ಬುದ್ಧಿಮತ್ತೆಯನ್ನು ಜವಾಬ್ದಾರಿಯುತವಾಗಿ ಬಳಸುವ ಪ್ರತಿಜ್ಞೆ ಮಾಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published on: Feb 19, 2026 10:02 AM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More