Melody: ಉಭಯ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ, ಇಟಲಿ ಪ್ರಧಾನಿ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಗಿಫ್ಟ್ ಕೊಟ್ಟ ಪ್ರಧಾನಿ ಮೋದಿ
ಮೆಲೋಡಿ ಚಾಕೊಲೇಟ್ ಭಾರತದಲ್ಲಿ ಫೇಮಸ್, ಅದರ ರುಚಿ ತಿಳಿಯದವರಿಲ್ಲ, ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಪ್ಯಾಕ್ ಉಡುಗೊರೆಯಾಗಿ ಕೊಟ್ಟಿದ್ದು, ಎರಡೂ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ ಎಂದು ಹಾರೈಸಿದ್ದಾರೆ. ಮೋದಿಯಿಂದ ಗಿಫ್ಟ್ ಪಡೆದಿರುವ ಮೆಲೋನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ರೋಮ್, ಮೇ 20: ಮೆಲೋಡಿ ಚಾಕೊಲೇಟ್ ಭಾರತದಲ್ಲಿ ಫೇಮಸ್, ಅದರ ರುಚಿ ತಿಳಿಯದವರಿಲ್ಲ, ಪ್ರಧಾನಿ ನರೇಂದ್ರ ಮೋದಿ ಇಟಲಿ ಪ್ರವಾಸದ ವೇಳೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ಮೆಲೋಡಿ ಚಾಕೊಲೇಟ್ ಪ್ಯಾಕ್ ಉಡುಗೊರೆಯಾಗಿ ಕೊಟ್ಟಿದ್ದು, ಎರಡೂ ದೇಶಗಳ ಸಂಬಂಧ ಇಷ್ಟೇ ಸಿಹಿಯಾಗಿರಲಿ ಎಂದು ಹಾರೈಸಿದ್ದಾರೆ. ಮೋದಿಯಿಂದ ಗಿಫ್ಟ್ ಪಡೆದಿರುವ ಮೆಲೋನಿ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ ಮೋದಿ ತಮ್ಮ ಐದು ರಾಷ್ಟ್ರಗಳ ಪ್ರವಾಸದ ಐದನೇ ಮತ್ತು ಕೊನೆಯ ಹಂತಕ್ಕಾಗಿ ಮಂಗಳವಾರ ರೋಮ್‌ಗೆ ಬಂದಿಳಿದರು. ವ್ಯಾಪಾರ, ಹೂಡಿಕೆ, ರಕ್ಷಣೆ, ಶುದ್ಧ ಇಂಧನ, ನಾವೀನ್ಯತೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸಾಂಸ್ಕೃತಿಕ ವಿನಿಮಯಗಳಲ್ಲಿ ಸಹಕಾರದ ಮೇಲೆ ಕೇಂದ್ರೀಕರಿಸುವ ಜಂಟಿ ಕಾರ್ಯತಂತ್ರದ ಕ್ರಿಯಾ ಯೋಜನೆ 2025-2029 ರ ಅಡಿಯಲ್ಲಿ ಭಾರತ ಮತ್ತು ಇಟಲಿ ಸಂಬಂಧಗಳನ್ನು ಗಟ್ಟಿಗೊಳಿಸುತ್ತಿರುವ ಸಂದರ್ಭದಲ್ಲಿ ಈ ಭೇಟಿ ನಡೆಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ