AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi in Karnataka Live: ಚಿಕ್ಕಬಳ್ಳಾಪುರದಲ್ಲಿ ಪ್ರಧಾನಿ ಮೋದಿ ಅಬ್ಬರದ ಭಾಷಣ; ನೇರ ಪ್ರಸಾರ ಇಲ್ಲಿದೆ

Narendra Modi in Karnataka Live: ಚಿಕ್ಕಬಳ್ಳಾಪುರದಲ್ಲಿ ಪ್ರಧಾನಿ ಮೋದಿ ಅಬ್ಬರದ ಭಾಷಣ; ನೇರ ಪ್ರಸಾರ ಇಲ್ಲಿದೆ

Ganapathi Sharma
|

Updated on:Apr 20, 2024 | 3:32 PM

Share

Lok Sabha Elections: ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಮೊದಲ ಹಂತದ ಮತದಾನಕ್ಕೆ ಇನ್ನು ಕೇವಲ ನಾಲ್ಕೈದು ದಿನ ಬಾಕಿ ಇದೆ. ಇದೇ ಸಂದರ್ಭದಲ್ಲಿ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ, ಚಿಕ್ಕಬಳ್ಳಾಪುರ ತಾಲೂಕಿನ ಅಗಲಕುರ್ಕಿ ಬಳಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶ ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿ ಭಾಷಣದ ನೇರ ಪ್ರಸಾರ ಇಲ್ಲಿದೆ.

ಚಿಕ್ಕಬಳ್ಳಾಪುರ, ಏಪ್ರಿಲ್ 20: ಲೋಕಸಭೆ ಚುನಾವಣೆಗೆ (Lok Sabha Elections) ಕರ್ನಾಟಕದಲ್ಲಿ ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು ಪ್ರಧಾನಿ ನರೇಂದ್ರ ಮೋದಿ (Narendra Modi) ಚುನಾವಣಾ ಪ್ರಚಾರಕ್ಕಾಗಿ ಮತ್ತೊಮ್ಮೆ ರಾಜ್ಯಕ್ಕೆ ಆಗಮಿಸಿದ್ದಾರೆ. ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಅಗಲಗುರ್ಕಿ ಬಳಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಪ್ರಧಾನಿ ಮೋದಿ ರಾಜ್ಯದ ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಸಹ ಸಮಾವೇಶದಲ್ಲಿ ಹಾಜರಿದ್ದಾರೆ.   ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು ಹಾಗೂ ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಹಾಜರಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ಹಾಗೂ ರಾಜ್ಯದ ಇತರ ಅಭ್ಯರ್ಥಿಗಳ ಪರವಾಗಿ ಮೋದಿ ಮತಯಾಚನೆ ಮಾಡುತ್ತಿದ್ದಾರೆ.

ಕಳೆದ ವಾರವಷ್ಟೇ ಮೈಸೂರಿನಲ್ಲಿ ಬೃಹತ್ ಸಮಾವೇಶ ಉದ್ದೇಶ ಮಾತನಾಡಿದ್ದ ಪ್ರಧಾನಿ ಬಿಜೆಪಿಗೆ ಮತ ನೀಡುವಂತೆ ಮತದಾರರಲ್ಲಿ ವಿನಂತಿ ಮಾಡಿದ್ದರು. ಬಳಿಕ ಮಂಗಳೂರಿಗೆ ತೆರಳಿದ್ದ ಅವರು, ಬೃಹತ್ ರೋಡ್ ಶೋದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ರಾಹುಲ್​​​ ಅಮೇಥಿಯಂತೆ ವಯನಾಡಿನಲ್ಲೂ ತನ್ನ ನೆಲೆ ಕಳೆದುಕೊಳ್ಳಲಿದ್ದಾರೆ: ಪ್ರಧಾನಿ ಮೋದಿ

ಲೋಕಸಭೆ ಚುನಾವಣೆ ಸಂಬಂಧ ದೇಶದಾದ್ಯಂತ ಬಿರುಸಿನ ಪ್ರಚಾರ ನಡೆಸುತ್ತಿರುವ ಪ್ರಧಾನಿ, ಮಹಾರಾಷ್ಟ್ರದ ನಾಂದೇಡ್ ಮತ್ತು ಪರ್ಭಾನಿಯಲ್ಲಿ ಚುನಾವಣಾ ಪ್ರಚಾರ ಸಮಾವೇಶಗಳಲ್ಲಿ ಭಾಗವಹಿಸಿ ನಂತರ ಕರ್ನಾಟಕಕ್ಕೆ ಬಂದಿದ್ದಾರೆ. ಮೋದಿ ಭಾಷಣದ ಲೈವ್ ವಿಡಿಯೋ ಇಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Apr 20, 2024 03:30 PM