AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

Video: ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ

ನಯನಾ ರಾಜೀವ್
|

Updated on: Apr 29, 2026 | 10:11 AM

Share

ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಶಿಯ ಜನತೆ ಅಭೂತಪೂರ್ವ ಸ್ವಾಗತ ಕೋರಿದ್ದಾರೆ. ವಿಶ್ವನಾಥನ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ಬುಧವಾರ ಪವಿತ್ರ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿಯವರನ್ನು ಶಂಖನಾದ ಮತ್ತು ಸಾಂಪ್ರದಾಯಿಕ ಡ್ರಮ್‌ಗಳ ಮೊಳಗಿನೊಂದಿಗೆ ಬರಮಾಡಿಕೊಳ್ಳಲಾಯಿತು. ಲಾಹುರಾಬಿರ್ ಕ್ರಾಸಿಂಗ್ ಸೇರಿದಂತೆ ನಗರದಾದ್ಯಂತ ಕಿಕ್ಕಿರಿದು ಸೇರಿದ್ದ ಭಕ್ತರು 'ಹರ ಹರ ಮಹಾದೇವ್' ಘೋಷಣೆಗಳೊಂದಿಗೆ ಪುಷ್ಪವೃಷ್ಟಿ ಮಾಡಿದರು.

ವಾರಣಾಸಿ,ಏಪ್ರಿಲ್ 29: ತಮ್ಮ ಸಂಸದೀಯ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಶಿಯ ಜನತೆ ಅಭೂತಪೂರ್ವ ಸ್ವಾಗತ ಕೋರಿದ್ದಾರೆ. ವಿಶ್ವನಾಥನ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ಬುಧವಾರ ಪವಿತ್ರ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿಯವರನ್ನು ಶಂಖನಾದ ಮತ್ತು ಸಾಂಪ್ರದಾಯಿಕ ಡ್ರಮ್‌ಗಳ ಮೊಳಗಿನೊಂದಿಗೆ ಬರಮಾಡಿಕೊಳ್ಳಲಾಯಿತು. ಲಾಹುರಾಬಿರ್ ಕ್ರಾಸಿಂಗ್ ಸೇರಿದಂತೆ ನಗರದಾದ್ಯಂತ ಕಿಕ್ಕಿರಿದು ಸೇರಿದ್ದ ಭಕ್ತರು ‘ಹರ ಹರ ಮಹಾದೇವ್’ ಘೋಷಣೆಗಳೊಂದಿಗೆ ಪುಷ್ಪವೃಷ್ಟಿ ಮಾಡಿದರು.

ಈ ಭೇಟಿಯ ವೇಳೆ ಪ್ರಧಾನಿಯವರು ಕಾಶಿಯ ಸಮಗ್ರ ಅಭಿವೃದ್ಧಿಗಾಗಿ ಸುಮಾರು 6,350 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿ, ಶಂಕುಸ್ಥಾಪನೆ ನೆರವೇರಿಸಿದರು. ಇದರಲ್ಲಿ 1,050 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ 48 ಪೂರ್ಣಗೊಂಡ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಾಯಿತು.

ಇದಕ್ಕೂ ಮುನ್ನ ಮಂಗಳವಾರ ನಡೆದ ಬನಾರಸ್ ಲೋಕೋಮೋಟಿವ್ ವರ್ಕ್ಸ್ ಮೈದಾನದ ‘ಮಹಿಳಾ ಸಮ್ಮೇಳನ’ದಲ್ಲಿ ಭಾಗವಹಿಸಿದ್ದ ಪ್ರಧಾನಿ, ಸ್ತ್ರೀ ಶಕ್ತಿಯ ಮಹತ್ವವನ್ನು ಸಾರಿದರು. ಈ ಸಂದರ್ಭದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ನಾಯಕ ನಿತಿನ್ ನಬಿನ್ ಉಪಸ್ಥಿತರಿದ್ದರು. ಒಟ್ಟಾರೆಯಾಗಿ ಪ್ರಧಾನಿಯವರ ಈ ಭೇಟಿಯು ಕಾಶಿಯ ಧಾರ್ಮಿಕ ಮತ್ತು ಆರ್ಥಿಕ ಚಿತ್ರಣವನ್ನು ಬದಲಿಸುವ ಸಂಕಲ್ಪವನ್ನು ಪುನರುಚ್ಚರಿಸಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us