AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಗೆ ಇಂದು ಮಹತ್ವದ ದಿನ, ಅಟಲ್ ಬಿಹಾರಿ ವಾಜಪೇಯಿ ಸಮಾಧಿಗೆ ಗೌರವ ನಮನ

ಮೋದಿಗೆ ಇಂದು ಮಹತ್ವದ ದಿನ, ಅಟಲ್ ಬಿಹಾರಿ ವಾಜಪೇಯಿ ಸಮಾಧಿಗೆ ಗೌರವ ನಮನ

ನಯನಾ ರಾಜೀವ್
|

Updated on: Jun 09, 2024 | 10:29 AM

Share

ಇಂದು ನರೇಂದ್ರ ಮೋದಿ(Narendra Modi) ಯವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಅಟಲ್​ ಬಿಹಾರಿ ವಾಜಪೇಯಿ ಸಮಾಧಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇಷ್ಟೇ ಅಲ್ಲದೆ ಗಾಂಧಿ ಸ್ಮಾರಕ ಹಾಗೂ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೂ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಇಂದು ಸಂಜೆ 7.15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ

ಇಂದು ನರೇಂದ್ರ ಮೋದಿ(Narendra Modi) ಯವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಅಟಲ್​ ಬಿಹಾರಿ ವಾಜಪೇಯಿ ಸಮಾಧಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇಷ್ಟೇ ಅಲ್ಲದೆ ಗಾಂಧಿ ಸ್ಮಾರಕ ಹಾಗೂ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೂ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ. ಇಂದು ಸಂಜೆ 7.15ಕ್ಕೆ ಪ್ರಮಾಣವಚನ ಕಾರ್ಯಕ್ರಮ ನೆರವೇರಲಿದೆ. ನರೇಂದ್ರ ಮೋದಿ ಮತ್ತು ಅವರ ಸಂಪುಟದ ಸುಮಾರು 30 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಬಾರಿ ಬಿಜೆಪಿ ಬಹುಮತ ಪಡೆಯದ ಕಾರಣ ಎನ್​ಡಿಎ ಮೈತ್ರಿಪಕ್ಷಗಳೊಂದಿಗೆ ಸೇರಿ ಕೇಂದ್ರದಲ್ಲಿ ಸರ್ಕಾರವನ್ನು ರಚಿಸುತ್ತಿದೆ. ಅದರಂತೆ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಪಕ್ಷದ ನಾಲ್ವರು ಹಾಗೂ ನಿತೀಶ್​ ಕುಮಾರ್​ ನಾಯಕತ್ವದ ಜೆಡಿಯುನಿಂದ ಇಬ್ಬರು ಕೇಂದ್ರ ಸರ್ಕಾರದಲ್ಲಿ ಸಚಿವರಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವರ ಅಧಿಕೃತ ಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ.

ಸಮಾರಂಭದಲ್ಲಿ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ನೆರೆಯ ಮತ್ತು ಹಿಂದೂ ಮಹಾಸಾಗರದ ಏಳು ದೇಶಗಳ ನಾಯಕರು ಭಾಗವಹಿಸಲಿದ್ದಾರೆ. ಶೇಖ್​ ಹಸೀನಾ ಮತ್ತು ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್ ಈಗಾಗಲೇ ದೆಹಲಿ ತಲುಪಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಹಸೀನಾ ಮತ್ತು ಅಫೀಫ್ ಹೊರತುಪಡಿಸಿ, ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಲ್ ಪ್ರಚಂಡ, ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನಾಥ್ ಮತ್ತು ಪ್ರಧಾನಿ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಕೂಡ ಆಗಮಿಸಲಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ