ಕನ್ನಡದಲ್ಲೇ ನಮಸ್ಕಾರ ಎಂದ ಮೋದಿ, ಚಾಮುಂಡೇಶ್ವರಿಗೆ ನಮಿಸಿದ್ರು

ಕನ್ನಡದಲ್ಲೇ ನಮಸ್ಕಾರ ಎಂದ ಮೋದಿ, ಚಾಮುಂಡೇಶ್ವರಿಗೆ ನಮಿಸಿದ್ರು

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 14, 2024 | 6:26 PM

ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು(ಏ.14) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ(BJP)​​ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಆಗಮಿಸಿದ್ದಾರೆ. ಈ ವೇಳೆ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ‘ಕನ್ನಡದಲ್ಲೇ ಭಾಷಣ ಆರಂಭಿಸಿ, ತಾಯಿ ಚಾಮುಂಡೇಶ್ವರ ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿದೆ ಎಂದರು.

ಮೈಸೂರು, ಏ.14: ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಇಂದು(ಏ.14) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಬಿಜೆಪಿ(BJP)​​ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಆಗಮಿಸಿದ್ದಾರೆ. ಈ ವೇಳೆ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ‘ಕನ್ನಡದಲ್ಲೇ ಭಾಷಣ ಆರಂಭಿಸಿ, ತಾಯಿ ಚಾಮುಂಡೇಶ್ವರ ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿದೆ. ತಾಯಿ ಭುವನೇಶ್ವರಿ, ತಾಯಿ ಕಾವೇರಿಗೆ ನನ್ನ ಪ್ರಣಾಮ ಸಲ್ಲಿಸುತ್ತೇನೆ ಎಂದರು. ಹೆಚ್​.ಡಿ.ದೇವೇಗೌಡರು ದೇಶದ ಅತ್ಯಂತ ಹಿರಿಯ ನಾಯಕರು, ಅವರ ಆಶೀರ್ವಾದ ಸಿಕ್ಕಿರುವುದು ಕೂಡ ಒಂದು ಸೌಭಾಗ್ಯವಾಗಿದೆ. ಮೈಸೂರು ಸೇರಿದಂತೆ ಇಡೀ ಕರ್ನಾಟಕದ ಆಶೀರ್ವಾದ ನಮಗೆ ಸಿಗಬೇಕು. ಈ ಲೋಕಸಭಾ ಚುನಾವಣೆ ಮುಂದಿನ 5 ವರ್ಷ ಬಹಳ ಮಹತ್ವದ್ದಾಗಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ