Unaccounted money: ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಕಾರಲ್ಲಿ ಸಾಗಿಸುತ್ತಿದ್ದ ದಾಖಲೆರಹಿತ ರೂ. 1.70 ಕೋಟಿ ಹಣ ವಶಪಡಿಸಿಕೊಂಡ ನರಗುಂದ ಪೊಲೀಸ್

ಅರುಣ್​ ಕುಮಾರ್​ ಬೆಳ್ಳಿ

Updated on: May 22, 2023 | 6:49 PM

ವಶಪಡಿಸಿಕೊಳ್ಳಲಾಗಿರುವ ಹಣ ಉದ್ಯಮಿ ವಿಕ್ರಮ್ ಸಿಂಗ್ ಗೆ ಸೇರಿದ್ದೆಂದು ವಿಚಾರಣೆಯಲ್ಲಿ ಗೊತ್ತಾಗಿದೆ.

ಗದಗ: ಜಿಲ್ಲೆಯ ನರಗುಂದ ಪಟ್ಟಣ ಪೊಲೀಸ್ (Nargund town police) ಠಾಣೆಯ ಸಿಬ್ಬಂದಿ ಜಪ್ತಿ ಹಣ ನೋಡಿ ಮಾರಾಯ್ರೇ. ನೋಡಲು ಕಣ್ಣು ಸಾಲವು ಮತ್ತು ಎಣಿಸಲು ಕೈ ಸಾಲವು. ಮೇಜಿನ ಮೇಲೆ ನೀಟಾಗಿ ಜೋಡಿಸಿಟ್ಟರುವ ದಾಖಲೆಯಿಲ್ಲದ ಹಣ ಎಷ್ಟು ಗೊತ್ತಾ? ಬರೋಬ್ಬರಿ ರೂ. 1.70 ಕೋಟಿ! ಹಣವನ್ನು ಕಾರೊಂದರಲ್ಲಿ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಸಾಗಿಸುವಾಗ ನರಗುಂದ ಪಟ್ಟಣ ಪೊಲೀಸ್ ಠಾಣೆಯ ಸಿಪಿಐ ಮಲ್ಲಯ್ಯ ಮಠಪತಿ (Mallaiah Mathapathi) ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಹಣ ಮತ್ತು ಕಾರು ಚಾಲಕ ಶಿವಬಸಯ್ಯನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಹುಬ್ಬಳ್ಳಿ ಉದ್ಯಮಿ ವಿಕ್ರಮ್ ಸಿಂಗ್ ಗೆ (Vikram Singh) ಸೇರಿದ ಹಣ ಇದೆಂದು ವಿಚಾರಣೆಯಲ್ಲಿ ಗೊತ್ತಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.