ಚಲಿಸುತ್ತಿದ್ದ KSRTC ಬಸ್ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಡೀಸೆಲ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ಚಾಲಕ ಮತ್ತು ಸ್ಥಳೀಯರ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಬೆಂಕಿ ನಂದಿಸಿ ದೊಡ್ಡ ಅನಾಹುತವನ್ನು ತಪ್ಪಿಸಲಾಗಿದೆ.
ತುಮಕೂರು, ಏಪ್ರಿಲ್ 16: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ. ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳೆಗೆ ಇಳಿಸಲಾಗಿದ್ದು, ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Apr 16, 2026 02:24 PM
Follow Us
Latest Videos
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!

