ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

Edited By:

Updated on: Apr 16, 2026 | 2:25 PM

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಕೆಎಸ್ಆರ್​ಟಿಸಿ ಬಸ್ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಡೀಸೆಲ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದ್ದು, ಚಾಲಕ ಮತ್ತು ಸ್ಥಳೀಯರ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲೇ ಬೆಂಕಿ ನಂದಿಸಿ ದೊಡ್ಡ ಅನಾಹುತವನ್ನು ತಪ್ಪಿಸಲಾಗಿದೆ.

ತುಮಕೂರು, ಏಪ್ರಿಲ್​​ 16: ಚಲಿಸುತ್ತಿದ್ದ ಕೆಎಸ್ಆರ್​ಟಿಸಿ ಬಸ್​ನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ. ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳೆಗೆ ಇಳಿಸಲಾಗಿದ್ದು, ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 16, 2026 02:24 PM
Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More